ETV Bharat / bharat

ನಾನು ಇನ್ನೆಷ್ಟು ದಿನ ಬದುಕುತ್ತೇನೆ ಎಂಬುದು ಗೊತ್ತಿಲ್ಲ: ಸ್ವಪ್ನಾ ಸುರೇಶ್ ಆತಂಕ

ನಾನು ಎಷ್ಟು ದಿನ ಬದುಕುತ್ತೇನೆ ಎಂದು ನನಗೆ ತಿಳಿದಿಲ್ಲ, ಆದ್ದರಿಂದ ನನಗೆ ಏನಾಗುತ್ತಿದೆ ಎಂಬುದನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ನಾನು ನಿರ್ಧರಿಸಿದ್ದೇನೆ. ಇದರಿಂದ ಜನರು ಏನು ನಡೆಯುತ್ತಿದೆ ಎಂಬುದನ್ನು ಸಹ ತಿಳಿದುಕೊಳ್ಳುತ್ತಾರೆ ಎಂದು ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಹೇಳಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ಗೆ ಜೀವ ಬೆದರಿಕೆ ಕರೆ

author img

By

Published : Jul 3, 2022, 9:09 PM IST

ತಿರುವನಂತಪುರಂ(ಕೇರಳ): ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆಯಂತೆ. ಇನ್ಮುಂದೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಕುಟುಂಬ ಅಥವಾ ಅವರ ಹೆಸರನ್ನು ಹೇಳುವುದನ್ನು ಮುಂದುವರಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುವ ಕರೆಗಳು ಬರುತ್ತಿವೆ ಎಂದು ಸ್ವಪ್ನಾ ಆರೋಪಿಸಿದ್ದಾರೆ.

ಉದ್ದೇಶಿತ ಬೆದರಿಕೆಯ ಆಡಿಯೋ-ಕ್ಲಿಪ್ ಅನ್ನು ಬಿಡುಗಡೆ ಮಾಡಿರುವ ಸಪ್ನಾ ಸುರೇಶ್, ಈ ಹಿಂದೆಯೂ ತನಗೆ ಇದೇ ರೀತಿಯ ಬೆದರಿಕೆಗಳು ಬರುತ್ತಿದ್ದವು. ಆದರೆ, ಇಂಟರ್ನೆಟ್ ಕರೆಗಳಾಗಿದ್ದರಿಂದ ಅವುಗಳನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ, ಇತ್ತೀಚಿನ ಸಾಮಾನ್ಯ ಕರೆಗಳು ಬರುತ್ತಿದ್ದು, ಅವರ ವಿಳಾಸವನ್ನೂ ಸಹ ಹೇಳುತ್ತಿದ್ದಾರೆ. ಈ ಎಲ್ಲಾ ಮಾಹಿತಿಯನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ರವಾನಿಸಿದ್ದೇನೆ. ಅವರು ಅಗತ್ಯ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಆಶಿಸುತ್ತೇನೆ ಎಂದಿದ್ದಾರೆ.

ನಾನು ಎಷ್ಟು ದಿನ ಬದುಕುತ್ತೇನೆ ಎಂಬುದು ನನಗೆ ತಿಳಿದಿಲ್ಲ, ಆದ್ದರಿಂದ ನನಗೆ ಏನಾಗುತ್ತಿದೆ ಎಂಬುದನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲು ನಾನು ನಿರ್ಧರಿಸಿದ್ದೇನೆ. ಇದರಿಂದ ಜನರು ಏನು ನಡೆಯುತ್ತಿದೆ ಎಂಬುದನ್ನು ಸಹ ತಿಳಿದುಕೊಳ್ಳುತ್ತಾರೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ವಿಜಯನ್, ಅವರ ಕುಟುಂಬ ಸದಸ್ಯರು ಮತ್ತು ಎಲ್‌ಡಿಎಫ್ ಶಾಸಕ ಕೆ ಟಿ ಜಲೀಲ್ ಭಾಗಿಯಾಗಿದ್ದಾರೆ ಎಂದು ಸುರೇಶ್ ಇತ್ತೀಚೆಗೆ ಮಾಧ್ಯಮಗಳ ಮುಂದೆ ಕೆಲವು ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದರು. ಇದು ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 164 ರ ಅಡಿಯಲ್ಲಿ ನ್ಯಾಯಾಲಯದ ಮುಂದೆ ನೀಡಿದ ಹೇಳಿಕೆಯಲ್ಲಿ ತಾನು ಅದನ್ನೇ ದಾಖಲಿಸಿದ್ದೇನೆ ಎಂದು ಅವರು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಈಶಾನ್ಯ ರಾಜ್ಯಗಳ ಎಲ್ಲಾ ಸಮಸ್ಯೆಗಳನ್ನು 2024 ರ ವೇಳೆಗೆ ಪರಿಹರಿಸಲಾಗುವುದು : ಅಮಿತ್ ಶಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.