ತಿರುವನಂತಪುರ(ಕೇರಳ): ಇಲ್ಲಿನ ಮನೆಯೊಂದರ ಕಂಪೌಂಡ್ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳು ನೆರೆಮನೆಯ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಆ್ಯಸಿಡ್ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ಆ್ಯಸಿಡ್ ದಾಳಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ರಾತ್ರಿ ತಿರುವನಂತಪುರ ಜಿಲ್ಲೆಯ ಕಟ್ಟಕಾಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಕೊಲೆ ಯತ್ನದ ಆರೋಪಗಳ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಸಂತ್ರಸ್ತೆಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಕೊಲೆ ಯತ್ನದ ಸೆಕ್ಷನ್ 307, ಅಪಾಯಕರ ಶಸ್ತ್ರಗಳಿಂದ ಉದ್ದೇಶಪೂರ್ವಕವಾಗಿ ಗಾಯಗೊಳಿಸುವ ಯತ್ನಕ್ಕಾಗಿ ಸೆಕ್ಷನ್ 326 ಹಾಗೂ ಐಪಿಸಿಯ ಎಸ್ಸಿ/ ಎಸ್ಟಿ ದೌರ್ಜನ್ಯ ಸೆಕ್ಷನ್ಗಳಡಿ ಎಫ್ಐಆರ್ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದರು. ಆರೋಪಿಯು ಪೊಲೀಸರ ವಶದಲ್ಲಿದ್ದು, ಕಟ್ಟಕಾಡಾ ಡಿವೈಎಸ್ಪಿ ಪ್ರಕರಣದ ತನಿಖೆಯ ನೇತೃತ್ವ ವಹಿಸಿದ್ದಾರೆ.