ETV Bharat / bharat

ಗಣಿ ಇಲಾಖೆ ಮಹಿಳಾ ಅಧಿಕಾರಿ ಮೇಲೆ ಹಲ್ಲೆ: 3 ಎಫ್​ಐಆರ್​ ದಾಖಲು, 44 ಜನರ ಬಂಧನ - ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ದಾಳಿ

ಗಣಿ ಇಲಾಖೆಯ ಮಹಿಳಾ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಬಿಹಾರ ಪೊಲೀಸರ ತನಿಖೆ ಮುಂದುವರೆದಿದೆ.

action-against-sand-mafia-who-attacks-woman-officer-in-patna
ಗಣಿ ಇಲಾಖೆ ಮಹಿಳಾ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ : 3 ಎಫ್​ಐಆರ್​ ದಾಖಲು..44 ಜನರ ಬಂಧನ
author img

By

Published : Apr 18, 2023, 9:35 PM IST

ಪಾಟ್ನಾ (ಬಿಹಾರ) : ಗಣಿ ಇಲಾಖೆಯ ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಪಾಟ್ನಾದ ಬಿಹ್ತಾ ಎಂಬಲ್ಲಿ ಸೋಮವಾರ ನಡೆದಿತ್ತು. ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದ ದುಷ್ಕರ್ಮಿಗಳು ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ವಿಡಿಯೋದಲ್ಲಿ ದುಷ್ಕರ್ಮಿಗಳ ಗುಂಪೊಂದು ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದನ್ನು ಕಾಣಬಹುದು. ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ವಿಡಿಯೋ ವೈರಲ್​ ಆಗುತ್ತಿದ್ದಂತೆ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧ 3 ಎಫ್​​ಐಆರ್​ ದಾಖಲಿಸಿರುವ ಪೊಲೀಸರು ಒಟ್ಟು 44 ಜನರನ್ನು ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ರಮಾನಂದ್ ಯಾದವ್​, ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತೇವೆ. ಬಳಿಕ ಏನು ಕ್ರಮ ಕೈಗೊಳ್ಳಬೇಕು. ಅದನ್ನು ಕೈಗೊಳ್ಳುತ್ತೇವೆ. ಸದ್ಯ ಪೊಲೀಸರು 45 ಜನರನ್ನು ಬಂಧಿಸಿದ್ದು, ಸುಮಾರು 50 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವಾಹನಗಳ ಮಾಲೀಕರ ಹಾಗೂ ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು. ಘಟನೆಯಲ್ಲಿ ಜಿಲ್ಲಾ ಗಣಿ ಇಲಾಖೆ ಮಹಿಳಾ ಅಧಿಕಾರಿ ಮತ್ತು ಇಬ್ಬರು ಗಣಿ ನಿರೀಕ್ಷಕರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ದಾಳಿ: ಅಧಿಕಾರಿಗಳ ಮೇಲೆ ದಾಳಿ ನಡೆಸಿರುವ ಬಗ್ಗೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದವು. ಬಿಹಾರದಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾ ಹೆಚ್ಚಾಗಿದೆ. ಸರ್ಕಾರವು ಪೊಲೀಸರನ್ನು ಕಟ್ಟಿ ಹಾಕಿದೆ ಎಂದು ಆರೋಪಿಸಿದವು.

ಬಿಹ್ತಾದಲ್ಲಿ ವಾಹನ ತಪಾಸಣೆ ವೇಳೆ ಗಣಿ ಮಾಫಿಯಾಗಳು ಮಹಿಳಾ ಅಧಿಕಾರಿಗಳಿಗೆ ಥಳಿಸಿದ್ದಾರೆ. ಈ ಬಗ್ಗೆ ಎಲ್ಲವನ್ನೂ ಪರಿಶೀಲಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಡಾ. ರಮಾನಂದ್ ಯಾದವ್ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ.ಚಂದ್ರಶೇಖರ್ ಸಿಂಗ್,​​ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಎಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಘಟನಾ ಸ್ಥಳದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 44 ಮಂದಿಯನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವವರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ ಎಂದು ಹೇಳಿದರು.

ಘಟನೆಯ ವಿವರ: ಸೋಮವಾರ ಬಿಹ್ತಾ ಎಂಬಲ್ಲಿ ಗಣಿ ಇಲಾಖೆ ಅಧಿಕಾರಿ ವಾಹನ ತಪಾಸಣೆ ನಡೆಸುತ್ತಿದ್ದರು. ತಪಾಸಣೆಯ ಸಮಯದಲ್ಲಿ ಅನೇಕ ವಾಹನಗಳನ್ನು ತಡೆದು ರಸ್ತೆಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಸುಮಾರು 3.45ರ ಹೊತ್ತಿಗೆ ಇಲ್ಲಿನ ಕೋಯಿಲ್ವಾರ್ ಸೇತುವೆಯ ಬಳಿಯಿಂದ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಜೊತೆಗೆ ಕೆಲ ದುಷ್ಕರ್ಮಿ ಮಹಿಳಾ ಅಧಿಕಾರಿಯನ್ನು ಥಳಿಸಿದ್ದಾರೆ. ಗಾಯಗೊಂಡ ಜಿಲ್ಲಾ ಗಣಿ ಅಧಿಕಾರಿ ಹಾಗೂ ಇಬ್ಬರು ಗಣಿ ನಿರೀಕ್ಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರನ್ನು ಕುಮಾರ್ ಗೌರವ್, ಸೈಯದ್ ಫರ್ಹೀನ್ ಮತ್ತು ಅಮ್ಯಾ ಕುಮಾರಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಗಣಿ ಇಲಾಖೆಯ ಮಹಿಳಾ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.