ETV Bharat / bharat

ದೇಶಾದ್ಯಂತ ತಗ್ಗಿದ ಕೋವಿಡ್‌ ಆರ್ಭಟ; ಸಕ್ರಿಯ ಸೋಂಕು ಪ್ರಕರಣ 16 ಸಾವಿರಕ್ಕೆ ಇಳಿಕೆ - ಕೋಟಿ ಕೋವಿಡ್ ಲಸಿಕೆ

24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಪೈಕಿ 145 ಪ್ರಕರಣಗಳ ಇಳಿಕೆ ದಾಖಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,10,590 ಕ್ಕೆ ಏರಿದೆ. ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣ 16098 ಕ್ಕೆ ಇಳಿಕೆ
active-covid-cases-in-the-country-decrease-to-16098
author img

By

Published : Nov 3, 2022, 12:10 PM IST

ನವದೆಹಲಿ: ಗುರುವಾರ ಅಪ್ಡೇಟ್ ಮಾಡಲಾದ ಮಾಹಿತಿಯ ಪ್ರಕಾರ, ಕಳೆದ ಒಂದು ದಿನದಲ್ಲಿ ದೇಶದಲ್ಲಿ 1,321 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಕೋವಿಡ್-19 ಪ್ರಕರಣಗಳ ಸಂಖ್ಯೆ 4,46,57,149 ಕ್ಕೆ ಏರಿದೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 16,098 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ಕೊರೊನಾದಿಂದ ಕೇರಳದಲ್ಲಿ ಐವರು ಸಾವಿಗೀಡಾಗಿರುವುದು ಸೇರಿದಂತೆ ಒಟ್ಟು ಒಂಬತ್ತು ಸಾವುಗಳೊಂದಿಗೆ ಮೃತರ ಸಂಖ್ಯೆ 5,30,461 ಕ್ಕೆ ಏರಿದೆ ಎಂದು ಬೆಳಗ್ಗೆ 8 ಗಂಟೆಗೆ ದಾಖಲಿಸಲಾದ ಮಾಹಿತಿ ತಿಳಿಸಿದೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳಲ್ಲಿ 0.04 ಪ್ರತಿಶತವನ್ನು ಒಳಗೊಂಡಿವೆ. ಆದರೆ ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರವು 98.78 ಪ್ರತಿಶತಕ್ಕೆ ಏರಿದೆ ಎಂದು ಸಚಿವಾಲಯದ ವೆಬ್‌ಸೈಟ್ ತಿಳಿಸಿದೆ.

24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳ ಪೈಕಿ 145 ಪ್ರಕರಣಗಳ ಇಳಿಕೆ ದಾಖಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,10,590 ಕ್ಕೆ ಏರಿದೆ. ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ವೆಬ್‌ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 219.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ಭಾರತದ ಕೋವಿಡ್-19 ಸಂಖ್ಯೆಯು ಆಗಸ್ಟ್ 7, 2020 ರಂದು 20 ಲಕ್ಷದ ಗಡಿಯನ್ನು ದಾಟಿತ್ತು. ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ ಆಗಿತ್ತು. ಇದು ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ ದಾಟಿದೆ. ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿತ್ತು. ಕಳೆದ ವರ್ಷ ಮೇ 4 ರಂದು ಎರಡು ಕೋಟಿ ಮತ್ತು ಜೂನ್ 23 ರಂದು ಮೂರು ಕೋಟಿ ಮೈಲಿಗಲ್ಲನ್ನು ದಾಟಿದೆ. ಈ ವರ್ಷ ಜನವರಿ 25 ರಂದು ನಾಲ್ಕು ಕೋಟಿ ಗಡಿ ದಾಟಿದೆ.

ಇದನ್ನೂ ಓದಿ: ಭಾರತದ ಲಸಿಕೆ ತಯಾರಿಕೆ ಸಾಮರ್ಥ್ಯ ಅದ್ಭುತ: ವೈಟ್​ಹೌಸ್​ನಲ್ಲಿ ಭಾರತಕ್ಕೆ ಪ್ರಶಂಸೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.