ETV Bharat / bharat

UPSC ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶ: ಸುಪ್ರೀಂ‌ಗೆ ಕೇಂದ್ರ ಸರ್ಕಾರ ಮಾಹಿತಿ - ಯುಪಿಎಸ್‌ಸಿ ಪರೀಕ್ಷೆ

ಕೋವಿಡ್​ನಿಂದಾಗಿ ನಾಗರಿಕ ಸೇವಾ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಪ್ರಸ್ತಾಪವನ್ನು ಸರ್ಕಾರ ಮತ್ತು ಕೇಂದ್ರ ಲೋಕಸೇವಾ ಸೇವಾ ಆಯೋಗ (ಯುಪಿಎಸ್‌ಸಿ) ಒಪ್ಪಿದೆ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

author img

By

Published : Jan 11, 2021, 7:05 PM IST

Updated : Jan 11, 2021, 7:13 PM IST

ನವದೆಹಲಿ: ಕೋವಿಡ್​ನಿಂದಾಗಿ ನಾಗರಿಕ ಸೇವಾ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡುವ ಪ್ರಸ್ತಾಪವನ್ನು ಸರ್ಕಾರ ಮತ್ತು ಯುಪಿಎಸ್‌ಸಿ ಒಪ್ಪಿದೆ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರದ ಈ ಅಭಿಪ್ರಾಯವನ್ನು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್​​ ನೇತೃತ್ವದ ನ್ಯಾಯಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್​ಜಿ) ಎಸ್​​.ವಿ.ರಾಜುಗೆ ತಿಳಿಸಿದೆ. ಎಎಸ್​ಜಿ ರಾಜು, ಈ ವಿಷಯದ ವಿಚಾರಣೆಯನ್ನು ಫೆಬ್ರವರಿ ಮೊದಲ ವಾರಕ್ಕೆ ಮುಂದೂಡಲು ಕೋರಿದರು.

2020 ರ ಅಕ್ಟೋಬರ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಕೊನೆಯ ಪ್ರಯತ್ನ ಮಾಡಿದ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಹೆಚ್ಚುವರಿ ಪ್ರಯತ್ನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ಕೋವಿಡ್-19 ಕಾರಣದಿಂದಾಗಿ ನಾಗರಿಕ ಸೇವಾ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಇದು ಹೆಚ್ಚುವರಿ ಅವಕಾಶವನ್ನು ಸಹ ಕೋರಿತ್ತು.

ಸಾಂಕ್ರಾಮಿಕ ರೋಗದಿಂದ ಉಂಟಾಗುವ ತೊಂದರೆಗಳನ್ನು ಪರಿಗಣಿಸಿ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡುವಂತೆ ಕೋರ್ಟ್, ಕೇಂದ್ರ ಹಾಗೂ ಯುಪಿಎಸ್​ಸಿಗೆ ನಿರ್ದೇಶನ ನೀಡಿತ್ತು.

Last Updated : Jan 11, 2021, 7:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.