ಅಹಮದಾಬಾದ್: ಗುಜರಾತ್ ಗಲಭೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಪ್ರೀಂಕೋರ್ಟ್ ಕ್ಲೀನ್ ಚಿಟ್ ನೀಡಿದ ಬೆನ್ನಲ್ಲೇ ಕ್ರೈಂ ಬ್ರಾಂಚ್ ಮಾಜಿ ಡಿಐಜಿ ಸಂಜೀವ್ ಭಟ್, ಮಾಜಿ ಡಿಜಿಪಿ ಆರ್.ಬಿ.ಶ್ರೀಕುಮಾರ್ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಬಿ.ಶ್ರೀಕುಮಾರ್ ಮತ್ತು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ಬಂಧಿಸಿದ್ದಾರೆ. ಸಂಜೀವ್ ಭಟ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಲಾಕ್ ಆಫ್ ಡೆತ್ ಪ್ರಕರಣದಲ್ಲೂ ಭಟ್ ದೋಷಿಯಾಗಿದ್ದು, ಸದ್ಯ ಜೈಲಿನಲ್ಲಿದ್ದಾರೆ.
-
#WATCH | Gujarat ATS team with detained Teesta Setalvad reached Crime Branch, Ahmedabad, early morning today. She was taken into custody yesterday, June 25, in relation to a case on her NGO pic.twitter.com/eclvhuiFmN
— ANI (@ANI) June 26, 2022 " class="align-text-top noRightClick twitterSection" data="
">#WATCH | Gujarat ATS team with detained Teesta Setalvad reached Crime Branch, Ahmedabad, early morning today. She was taken into custody yesterday, June 25, in relation to a case on her NGO pic.twitter.com/eclvhuiFmN
— ANI (@ANI) June 26, 2022#WATCH | Gujarat ATS team with detained Teesta Setalvad reached Crime Branch, Ahmedabad, early morning today. She was taken into custody yesterday, June 25, in relation to a case on her NGO pic.twitter.com/eclvhuiFmN
— ANI (@ANI) June 26, 2022
2022ರ ಗುಜರಾತ್ ಗಲಭೆ ಸಂತ್ರಸ್ತರಿಗೆ ನೆರವು ನೀಡುವ ನೆಪದಲ್ಲಿ ತೀಸ್ತಾ ಸೆಟಲ್ವಾಡ್ ಎನ್‌ಜಿಒ ನಡೆಸುತ್ತಿದ್ದಾರೆ. ಈ ಎನ್‌ಜಿಒಗೆ ವಿದೇಶಗಳಿಂದ ಅಕ್ರಮವಾಗಿ ಹಣ ಬಂದಿದೆ. ಈ ಕುರಿತು ತನಿಖೆ ನಡೆಸಿದ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದೆ. ಈ ಮೂವರೂ 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣದಂಡನೆ ಶಿಕ್ಷೆಗೆ ಗುರಿಪಡಿಸುವಂತಹ ಅಪರಾಧಗಳಲ್ಲಿ ಶಿಕ್ಷೆಗೆ ಒಳಗಾಗುವಂತೆ ಅನೇಕ ವ್ಯಕ್ತಿಗಳ ವಿರುದ್ಧ ಸುಳ್ಳು ಪುರಾವೆಗಳನ್ನು ಸೃಷ್ಟಿಸುವ ಮೂಲಕ ಕಾನೂನಿನ ದುರ್ಬಳಕೆ ಮಾಡುವಲ್ಲಿ ಸಂಚು ನಡೆಸಿದ್ದರು ಎಂದು ಅಹಮದಾಬಾದ್ ಅಪರಾಧ ದಳ ವಿಭಾಗದ ಇನ್‌ಸ್ಪೆಕ್ಟರ್ ಡಿ.ಬಿ ಬರಾದ್ ದೂರು ದಾಖಲಿಸಿದ್ದಾರೆ.
ಉನ್ನತ ಮಟ್ಟದ ಸಂಚು: ಮೋದಿ ಅವರ ವ್ಯಕ್ತಿತ್ವವನ್ನು ಹಾಳು ಮಾಡಲು ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಸೆಟಲ್ವಾಡ್ ಅವರು ಸುಳ್ಳು ವಿಚಾರಗಳನ್ನು ಹರಡಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಶನಿವಾರ ಬೆಳಗ್ಗೆಯಷ್ಟೇ ಹೇಳಿದ್ದರು. ಗೋಧ್ರಾ ಹತ್ಯಾಕಾಂಡದಲ್ಲಿ ಉನ್ನತಮಟ್ಟದ ಸಂಚು ಅಡಗಿದೆ ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದವರಲ್ಲಿ ಸೆಟಲ್ವಾಡ್ ಸಹ ಒಬ್ಬರು.
ಸೆಟಲ್ವಾಡ್ ಸಂಚಿನ ಹಿಂದೆ ಕಾಂಗ್ರೆಸ್: ತೀಸ್ತಾ ಸೆಟಲ್ವಾಡ್ ವಿರುದ್ಧ ಸುಪ್ರೀಂಕೋರ್ಟ್‌ನ ಟೀಕೆ ಟಿಪ್ಪಣಿಗಳನ್ನು ಉಲ್ಲೇಖಿಸಿ ಬಿಜೆಪಿ ಟ್ವೀಟ್ ಮಾಡಿದೆ. ಕಾಂಗ್ರೆಸ್ ಮತ್ತು ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧದ ಕಾರ್ಯಕರ್ತರ ಅಭಿಯಾನದ ಹಿಂದಿನ "ಚಾಲಕ ಶಕ್ತಿ"ಯಾಗಿದ್ದರು ಎಂದು ಆರೋಪಿಸಿದೆ.
ಇದನ್ನೂ ಓದಿ: ಗುಜರಾತ್ ಗಲಭೆ 2002: ಎಸ್ಐಟಿ ಕ್ಲೀನ್‌ಚಿಟ್ ಎತ್ತಿಹಿಡಿದ ಸುಪ್ರೀಂ ಕೋರ್ಟ್... ಪಿಎಂ ಮೋದಿಗೆ ರಿಲೀಫ್