ETV Bharat / bharat

ರೈತರನ್ನ ಭಯೋತ್ಪಾದಕರು ಎಂದ ಪ್ರಕರಣ.. ತುಮಕೂರಲ್ಲಿರುವ ಕೇಸ್‌ ರದ್ದು ಕೋರಿ ಕಂಗನಾ ಹೈಕೋರ್ಟ್‌ಗೆ ಮೊರೆ - Bangalore news

ಅರ್ಜಿಯಲ್ಲಿ ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ಹಾಗೂ ದೂರುದಾರ ವಕೀಲ ಎಲ್. ರಮೇಶ್ ನಾಯ್ಕ್ ಅವರನ್ನು ಪ್ರತಿವಾದಿಗಳಾಗಿ ನಮೂದಿಸಲಾಗಿದೆ. ಅರ್ಜಿ ಇನ್ನೂ ವಿಚಾರಣೆಗೆ ನಿಗದಿಯಾಗಬೇಕಿದೆ..

actress-kangana
ನಟಿ ಕಂಗನಾ
author img

By

Published : Feb 27, 2021, 7:05 PM IST

ಬೆಂಗಳೂರು : ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಆರೋಪ ಸಂಬಂಧ ತುಮಕೂರು ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ನಟಿ ಕಂಗನಾ ರಣಾವತ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈ ಸಂಬಂಧ ನಟಿ ಕಂಗನಾ ರಣಾವತ್ ಪರ ವಕೀಲರಾದ ಇರ್ಫಾನಾ ನಜೀರ್ ಫೆ.26ರ ಬೆಳಗ್ಗೆ ಹೈಕೋರ್ಟ್​​ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಕಂಗನಾ ವಿರುದ್ಧ ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿರುವ ಖಾಸಗಿ ದೂರು ಹಾಗೂ ಕೋರ್ಟ್ ಆದೇಶದ ಮೇರೆಗೆ ದಾಖಲಿಸಿರುವ ಎಫ್ಐಆರ್ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿದ್ದಾರೆ.

ಅರ್ಜಿಯಲ್ಲಿ ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ಹಾಗೂ ದೂರುದಾರ ವಕೀಲ ಎಲ್. ರಮೇಶ್ ನಾಯ್ಕ್ ಅವರನ್ನು ಪ್ರತಿವಾದಿಗಳಾಗಿ ನಮೂದಿಸಲಾಗಿದೆ. ಅರ್ಜಿ ಇನ್ನೂ ವಿಚಾರಣೆಗೆ ನಿಗದಿಯಾಗಬೇಕಿದೆ.

ಪ್ರಕರಣದ ಹಿನ್ನೆಲೆ : ದೆಹಲಿ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ನಟಿ ಕಂಗನಾ ರಣಾವತ್ 2020 ಸೆಪ್ಟೆಂಬರ್ 21ರಂದು ಟ್ವೀಟ್ ಮಾಡಿ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ ಎಂದು ಆರೋಪಿಸಿದ್ದ ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ಅವರು, ಈ ಸಂಬಂಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸಬೇಕೆಂದು ಕೋರಿ 2020 ಸೆಪ್ಟೆಂಬರ್ 25ರಂದು ಸ್ಥಳೀಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ಅರ್ಜಿದಾರರ ಆರೋಪಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ 156(6) ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಜರುಗಿಸಲು ಕ್ಯಾತಸಂದ್ರ ಠಾಣೆ ಪೊಲೀಸರಿಗೆ ನಿರ್ದೇಶಿಸಿತ್ತು. ಈ ಹಿನ್ನೆಲೆ ಪಿಸಿಆರ್ ಮೇರೆಗೆ ಸ್ಥಳೀಯ ನ್ಯಾಯಾಲಯ ಹೊರಡಿಸಿರುವ ಆದೇಶ ಹಾಗೂ ಎಫ್ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ನಟಿ ಕಂಗನಾ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.