ಮುಂಬೈ(ಮಹಾರಾಷ್ಟ್ರ): ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಸಂದರ್ಭದಲ್ಲಿ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉದ್ಯಮಿಯನ್ನು ಬಂಧನ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಶಹರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಉದ್ಯಮಿಯನ್ನ ಸೆಕ್ಷನ್ 354,354(B) ಅಡಿ ಬಂಧನ ಮಾಡಲಾಗಿದೆ. ಬಂಧಿತ ಆರೋಪಿಯನ್ನ ನಿತಿನ್ ಬನ್ಸಾಲ್ ಎಂದು ಗುರುತಿಸಲಾಗಿದ್ದು, ಈತ ಮೂಲತಃ ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಎನ್ನಲಾಗಿದೆ. ನಟಿ ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿರಿ: ಆರ್ಯನ್ ಖಾನ್ಗೆ ಸದ್ಯಕ್ಕಿಲ್ಲ ರಿಲೀಫ್.. ಸ್ಟಾರ್ ಪುತ್ರನಿಗೆ ಇಂದೂ ಸಿಗಲಿಲ್ಲ ಜಾಮೀನು
ನಟಿ ಹಾಗೂ ಬಂಧಿತ ಆರೋಪಿ ಇಂಡಿಗೋ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದರು. ಈ ವೇಳೆ, ಸಂತ್ರಸ್ತ ನಟಿ ಬ್ಯಾಗ್ ತೆಗೆದುಕೊಳ್ಳಲು ಮುಂದಾಗಿದ್ದ ವೇಳೆ ಆರೋಪಿ ಆಕೆಯನ್ನ ಹಿಂದಿನಿಂದ ಹಿಡಿದುಕೊಂಡಿದ್ದಾನೆಂದು ಆರೋಪ ಮಾಡಿದ್ದಾಳೆ.
ಈ ವೇಳೆ ನಟಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ವ್ಯಕ್ತಿ ಎಂಬ ಕಾರಣದಿಂದ ಹಿಡಿದುಕೊಂಡಿರುವೆ ಎಂದು ಉದ್ಯಮಿ ಕ್ಷಮೆ ಕೇಳಲು ಮುಂದಾಗಿದ್ದಾನೆ. ಆದರೆ, ವಿಮಾನಯಾನ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಆತನ ಬಂಧನ ಮಾಡಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನಾಳೆಯವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.