ETV Bharat / bharat

ಅಮೀರ್​ಖಾನ್​ ಅಭಿನಯದ ಜಾಹೀರಾತು ಹಿಂದೂಗಳಲ್ಲಿ ಅಶಾಂತಿ ಸೃಷ್ಟಿಸುತ್ತದೆ: ಸಂಸದ ಅನಂತ್ ಕುಮಾರ್ ಹೆಗಡೆ - BJP leader Hegde

ಬಾಲಿವುಡ್ ನಟ ಅಮೀರ್ ಖಾನ್ ಅಭಿನಯಿಸಿದ ಜಾಹೀರಾತಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂಬ ಮನವಿಗೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ.

ಅನಂತ್ ಕುಮಾರ್ ಹೆಗಡೆ
ಅನಂತ್ ಕುಮಾರ್ ಹೆಗಡೆ
author img

By

Published : Oct 21, 2021, 6:10 PM IST

ಬೆಂಗಳೂರು: ಬಾಲಿವುಡ್ ನಟ ಅಮೀರ್ ಖಾನ್ ಅಭಿನಯಿಸಿದ ಜಾಹೀರಾತಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂಬ ಮನವಿಗೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದ್ದಾರೆ. ಈ ಕುರಿತಾಗಿ ಜಾಹೀರಾತು ಕಂಪನಿಗೆ ಪತ್ರ ಬರೆಯುವ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪರಿಸರವಾದಿ, ಪ್ರಾಣಿಪ್ರೇಮಿ ಅಮೀರ್ ಖಾನ್ ಅಭಿನಯಿಸಿರುವ ಜಾಹೀರಾತೊಂದರಲ್ಲಿ ದೀಪಾವಳಿ ಹಬ್ಬದಲ್ಲಿ ಹಿಂದೂಗಳಿಗೆ ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ. ಅವರು ಪರಿಸರ ಹಾಗೂ ಪ್ರಾಣಿಗಳ ಬಗ್ಗೆ ತೋರುತ್ತಿರುವ ಕಾಳಜಿಗೆ ನನ್ನ ಮೆಚ್ಚುಗೆ. ಅದರಂತೆ ಅನ್ಯಧರ್ಮಗಳಲ್ಲಿ (ತಾನು ಪ್ರತಿಪಾದಿಸುವ ಧರ್ಮವನ್ನು ಹಿಡಿದು) ನಡೆಯುವ ಎಷ್ಟೋ ಆಚರಣೆಗಳ ಬಗ್ಗೆ ಯಾಕೆ ಮೌನ ಎಂದಿದ್ದಾರೆ.

ಪ್ರತಿದಿನ ಬೆಳಗ್ಗೆ ಚೀರುವ ಧ್ವನಿವರ್ಧಕಗಳು, ರಸ್ತೆಗಳ ಮಧ್ಯದಲ್ಲಿ ನಮಾಜ್ ಮಾಡುವುದು ಇನ್ನು ಅದೆಷ್ಟೋ ಆಚರಣೆಗಳ ಬಗ್ಗೆ ಅಮೀರ್ ಖಾನ್ ಗಮನ ಹರಿಸಿದರೆ ಎಷ್ಟೋ ಸಮಸ್ಯೆಗಳು ಬಗೆಹರಿಯುತ್ತವೆ. ಅಂದ ಹಾಗೆ ಈ ರೀತಿಯ ಜಾಹೀರಾತುಗಳು ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಕುತಂತ್ರವಲ್ಲದೇ ಮತ್ತೇನೂ ಅಲ್ಲ. ಅಂತೆಯೇ ಭಾರತದಲ್ಲಿ ಇಂಥ ಹಿಂದೂ ವಿರೋಧಿ ಅಭಿನೇತರಿರಗೇನು ಕಮ್ಮಿಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಜಾಹೀರಾತನ್ನು ಅನಂತ ವರಧಾನ್ ಗೋಯೆಂಕ ಮಾಲೀಕತ್ವದ ಸಿಇಎಟಿ ಸಂಸ್ಥೆಯು ಪ್ರಸ್ತುತ ಪಡೆಸಿದ್ದು, ಕೂಡಲೇ ಈ ಜಾಹೀರಾತನ್ನು ಹಿಂಪಡೆಯಬೇಕು ಹಾಗೂ ಹಿಂದೂಗಳೇ ಆಗಿರುವ ಅವರು ಹಿಂದುಗಳ ಭಾವನೆಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕಾಗಿ ಆಗ್ರಹಿಸುತ್ತೇನೆ ಎಂದಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗಡೆ ಈ ಪತ್ರವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.