ETV Bharat / bharat

ವಿಸ್ಮಯಾ ಕೊಲೆ ಕೇಸ್​ನಲ್ಲಿ ಪತಿಯೇ ಅಪರಾಧಿ.. ಕೇರಳ ಕೋರ್ಟ್​ನಿಂದ ತೀರ್ಪು

ವರದಕ್ಷಿಣೆ ಕಿರುಕುಳದಿಂದ ಸಾವನ್ನಪ್ಪಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾ ಪ್ರಕರಣದಲ್ಲಿ ಆಕೆಯ ಗಂಡನೇ ಅಪರಾಧಿ ಎಂದು ಕೇರಳ ಕೋರ್ಟ್​ ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಕಟವಾಗುವ ಸಾಧ್ಯತೆ ಇದೆ.

additional-sessions
ವಿಸ್ಮಯಾ ಕೊಲೆ ಕೇಸ್​ನಲ್ಲಿ ಪತಿಯೇ ಆರೋಪಿ.
author img

By

Published : May 23, 2022, 4:00 PM IST

Updated : May 23, 2022, 4:48 PM IST

ಕೊಲ್ಲಂ (ಕೇರಳ): ಕಳೆದ ವರ್ಷ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಕೇರಳದ ನರ್ಸಿಂಗ್ ವಿದ್ಯಾರ್ಥಿನಿ ವಿಸ್ಮಯಾಳ ಸಾವಿನ ಕೇಸ್​ನಲ್ಲಿ ಗಂಡನೇ ಹಂತಕನೆಂದು ಕೋರ್ಟ್ ತೀರ್ಪು ನೀಡಿದೆ. ಕಳೆದ ವರ್ಷ ಜೂನ್‌ನಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾಳ ಪತಿಯನ್ನು ವರದಕ್ಷಿಣೆ ಸಾವು ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೇರಳದ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ-1 ಸುಜಿತ್ ಕೆ ಎನ್ ಅವರು ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿ ವರದಕ್ಷಿಣೆ ಸಂಬಂಧಿತ ಕಿರುಕುಳದ ಅಪರಾಧದ ಮೇಲೆ ವಿಸ್ಮಯಾಳ ಪತಿಯನ್ನು ಆರೋಪಿ ಎಂದು ಘೋಷಿಸಿದ್ದು, ನಾಳೆ(ಮಂಗಳವಾರ) ಶಿಕ್ಷೆ ಪ್ರಕಟಿಸುವ ನಿರೀಕ್ಷೆಯಿದೆ.

ಅಪರಾಧಿ ಎಸ್ ಕಿರಣ್ ಕುಮಾರ್‌ಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ಪ್ರಾಸಿಕ್ಯೂಷನ್ ಕೋರಿದೆ. ಇದು ಸಾಮಾಜಿಕ ಅನಿಷ್ಟದ ವಿರುದ್ಧದ ತೀರ್ಪು ಮತ್ತು ಒಬ್ಬ ವ್ಯಕ್ತಿಯ ವಿರುದ್ಧವಲ್ಲ ಎಂದು ಎಸ್‌ಪಿಪಿ ಹೇಳಿದೆ.

ತೀರ್ಪು ಪ್ರಕಟವಾದ ಬಳಿಕ ಮಾತನಾಡಿದ ವಿಸ್ಮಯಾಳ ತಂದೆ, ಮಗಳಿಗೆ ನ್ಯಾಯ ಸಿಕ್ಕಿದೆ ಎಂದು ಕಣ್ಣೀರು ಹಾಕಿದರು. ಪ್ರಾಸಿಕ್ಯೂಷನ್ ಮತ್ತು ತನಿಖಾ ತಂಡದ ಪ್ರಯತ್ನಗಳಿಗೆ ಕೃತಜ್ಞತೆಗಳನ್ನು ಹೇಳಲು ನನ್ನ ಬಳಿ ಪದಗಳಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಕರಣ ಏನು?: ವಿಸ್ಮಯಾ ಅವರು ಜೂನ್ 21, 2021 ರಂದು ಕೊಲ್ಲಂ ಜಿಲ್ಲೆಯ ಸಾಸ್ತಾಮಕೋಟಾದಲ್ಲಿ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಘಟನೆಗೆ ಒಂದು ದಿನ ಮೊದಲು, ವಿಸ್ಮಯಾ ತನ್ನ ಸಂಬಂಧಿಕರಿಗೆ ವರದಕ್ಷಿಣೆ ಕಿರುಕುಳದ ಆರೋಪದ ಬಗ್ಗೆ ವಾಟ್ಸ್​ಆ್ಯಪ್​ ಸಂದೇಶಗಳನ್ನು ಕಳುಹಿಸಿದ್ದಳು. ಜೊತೆಗೆ ತನ್ನ ದೇಹದ ಮೇಲಾದ ಗಾಯಗಳು ಮತ್ತು ಹೊಡೆತಗಳ ಗುರುತುಗಳುಳ್ಳ ಫೋಟೋಗಳನ್ನು ರವಾನಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದರು.

ತನಿಖೆ ನಡೆಸಿದ ಪೊಲೀಸರು, ವರದಕ್ಷಿಣೆ ಕಿರುಕುಳದಿಂದ ವೈದ್ಯ ವಿದ್ಯಾರ್ಥಿನಿ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕೇರಳ ಪೊಲೀಸರು 500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಓದಿ: ಚಹಾ ಬೆಲೆಗಾಗಿ ನಡೆದ ಮಾತಿನ ಚಕಮಕಿ: ಢಾಬಾದ ಮಾಲೀಕನಿಗೆ ಥಳಿಸಿದ ಯುವಕರ ಗುಂಪು

Last Updated : May 23, 2022, 4:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.