ETV Bharat / bharat

ಯೋಗಿ ಬುಲ್ಡೋಜರ್​ ವಿರುದ್ಧ ಮೆಹಬೂಬಾ ಮುಫ್ತಿ ಕಿಡಿ

ಉತ್ತರಪ್ರದೇಶದಲ್ಲಿ ಗಲಭೆಕೋರರ ವಿರುದ್ಧ ಬುಲ್ಡೋಜರ್​ ಪ್ರಯೋಗ ಮಾಡುತ್ತಿರುವ ಯೋಗಿ ಆದಿತ್ಯನಾಥ್​ ಸರ್ಕಾರದ ವಿರುದ್ಧ ಜಮ್ಮು ಕಾಶ್ಮೀರದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಿಡಿಕಾರಿದ್ದಾರೆ.

author img

By

Published : Jun 11, 2022, 9:27 PM IST

ಮೆಹಬೂಬಾ ಮುಫ್ತಿ ಕಿಡಿ
ಮೆಹಬೂಬಾ ಮುಫ್ತಿ ಕಿಡಿ

ಶ್ರೀನಗರ: ಪ್ರವಾದಿ ಮುಹಮದ್​ರ ಕುರಿತಾದ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಉತ್ತರಪ್ರದೇಶದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ್​ ಸರ್ಕಾರ ಬುಲ್ಡೋಜರ್​ ಪ್ರಯೋಗ ಮಾಡಿದೆ. ಇದನ್ನು ಆಕ್ಷೇಪಿಸಿರುವ ಜಮ್ಮು ಕಾಶ್ಮೀರದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಉತ್ತರಪ್ರದೇಶದಲ್ಲಿ ಅರಣ್ಯ ಕಾನೂನು ಪಾಲನೆ ಮಾಡಲಾಗುತ್ತಿದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ಬುಲ್ಡೋಜರ್ ಪ್ರಯೋಗ ಮಾಡುತ್ತಿದ್ದಾರೆ. ಈ ಮೂಲಕ ಅವರು ರಾಜ್ಯದಲ್ಲಿ ಅರಣ್ಯ ಕಾನೂನು ನಡೆಸುತ್ತಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.

ಉತ್ತರಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನೇತೃತ್ವ ವಹಿಸಿದ್ದ ಪ್ರಮುಖ ಆರೋಪಿಯ ಆಪ್ತ ಸಹಾಯಕನ ಬಹುಮಹಡಿ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರವು ಶನಿವಾರ ಕೆಡವಿದ ನಂತರ ಮೆಹಬೂಬಾ ಮುಫ್ತಿ ಈ ಹೇಳಿಕೆ ನೀಡಿದ್ದಾರೆ.

ಉತ್ತರಪ್ರದೇಶದಲ್ಲಿ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಿದ್ದರೂ ನ್ಯಾಯಾಂಗ ಮೌನವಾಗಿ ವೀಕ್ಷಿಸುತ್ತಿದೆ. ಕೇಂದ್ರ ಸರ್ಕಾರವೂ ಕೂಡ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ವಿರುದ್ಧವೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಬೇಕೇ ಎಂದು ಪ್ರಶ್ನಿಸಿ ಟ್ವೀಟ್​ ಮಾಡಿದ್ದಾರೆ.

ಓದಿ: ಉತ್ತರಪ್ರದೇಶದಲ್ಲಿ ಗಲಭೆ ಸೃಷ್ಟಿಸಿದ 227 ಜನರ ಬಂಧನ.. ಕಠಿಣ ಕ್ರಮಕ್ಕೆ ಸಿಎಂ ಯೋಗಿ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.