ETV Bharat / bharat

ವಾರಾಣಸಿ ನಂತರ ಗೋರಖ್‌ಪುರದಲ್ಲಿ ರ‍್ಯಾಲಿ ಆಯೋಜನೆ : ಯೋಗಿ ಆದಿತ್ಯನಾಥ್ ತವರು ಕ್ಷೇತ್ರದಲ್ಲಿ ಪ್ರಿಯಾಂಕಾ ಭಾಷಣ - newdehli

ಉತ್ತರ ಪ್ರದೇಶದ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಕ್ಟೋಬರ್ 31 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತವರು ಗೋರಖ್‌ಪುರದಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ತವರು ಕ್ಷೇತ್ರದಲ್ಲಿ ಪ್ರಿಯಾಂಕಾ ಭಾಷಣ

author img

By

Published : Oct 26, 2021, 3:02 PM IST

ನವದೆಹಲಿ: ವಾರಾಣಸಿಯಲ್ಲಿ ಬೃಹತ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿರುವ ಪ್ರಿಯಾಂಕಾ, ರೈತರ ಸಮಸ್ಯೆ ಮತ್ತು ಬಡವರಿಗೆ ಅನ್ಯಾಯದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡರು.

ಕಳೆದ ಎರಡು ವರ್ಷಗಳಲ್ಲಿ ನಾನು ಯುಪಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಎರಡು ವರ್ಷಗಳ ಹಿಂದೆ ಸೋನಭದ್ರದಲ್ಲಿ ಭೂ ವಿವಾದದಲ್ಲಿ 13 ಆದಿವಾಸಿಗಳು ಕೊಲ್ಲಲ್ಪಟ್ಟರು. ಅದರಲ್ಲಿ ಆಡಳಿತಾರೂಢ ಬಿಜೆಪಿಯ ಕೆಲವು ನಾಯಕರು ಭಾಗಿಯಾಗಿದ್ದಾರೆ ಮತ್ತು ಜನರಿಗೆ ನ್ಯಾಯದ ಭರವಸೆ ಇಲ್ಲ ಎಂದು ಹರಿಹಾಯ್ದರು.

ರಾಜ್ಯದಲ್ಲಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂಬುದನ್ನು ತೋರಿಸಲು ಸೂಕ್ತ ಸಮಾರಂಭಧ ಸ್ಥಳವನ್ನೇ ಆಯ್ಕೆ ಮಾಡಲಾಗಿದೆ. ಇನ್ನು ಕಾಂಗ್ರೆಸ್​ನಲ್ಲಿ ಮಹಿಳೆಯರಿಗೆ 40 ಪ್ರತಿಶತ ಮೀಸಲಾತಿಯನ್ನು ಘೋಷಿಸಿದ ನಂತರ ಮತ್ತು ಏಳು ನಿರ್ಣಯಗಳನ್ನು ತನ್ನ ಪ್ರಣಾಳಿಕೆಯ ಭಾಗವಾಗಿ ಘೋಷಿಸಿದ ನಂತರ ಈ ರ‍್ಯಾಲಿ ಆರಂಭವಾಗಿದೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಕ್ಟೋಬರ್ 10 ರಂದು ಆಡಳಿತಾರೂಢ ಬಿಜೆಪಿ ವಿರುದ್ಧ ಬಿರುಸಿನ ದಾಳಿ ನಡೆಸುವ ಮೂಲಕ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪ್ರಚಾರವನ್ನು ಈಗಿನಿಂದಲೇ ಪ್ರಾರಂಭಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಕ್ಟೋಬರ್ 31 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತವರು ಗೋರಖ್‌ಪುರದಲ್ಲಿ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.