ಅಹಮದಾಬಾದ್(ಗುಜರಾತ್): 2017ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಕುಂಜಲ್ ಪಟೇಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಇವರು ಕುಟುಂಬದ ಸದಸ್ಯರೊಂದಿಗೆ ಜಗಳವಾಡಿದ್ದರು ಎಂಬ ಮಾಹಿತಿ ಸಹ ಲಭ್ಯವಾಗಿದೆ.
2017ರ ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ದಾರಿಯಾಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇವರು ಕೊರಳಿನಲ್ಲಿ ದಾಖಲೆಯ 1 ಕೆಜಿ ಚಿನ್ನ ಹಾಕಿಕೊಳ್ಳುತ್ತಿದ್ದರು. ಹೀಗಾಗಿ ಇವರನ್ನ ಅಹಮದಾಬಾದ್ನ ಗೋಲ್ಡ್ ಮ್ಯಾನ್ ಎಂದು ಎಲ್ಲರೂ ಕರೆಯುತ್ತಿದ್ದರು. ಆದರೆ, ಇದೀಗ ಆತ್ಮಹತ್ಯೆಗೆ ಶರಣಾಗಿರುವುದು ಅನೇಕ ಗೊಂದಲಗಳಿಗೆ ಕಾರಣವಾಗಿದೆ.
ಇದನ್ನೂ ಓದಿರಿ: ಸ್ನಾನಕ್ಕೆಂದು ತೆರಳಿದ್ದ ಮಕ್ಕಳಿಗೆ ಪೊಲೀಸರಿಂದ ವಿಚಿತ್ರ ಶಿಕ್ಷೆ... Viral ಆಯ್ತು Video
ಇವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಧುಪುರ ಪೊಲೀಸರ ಪ್ರಕರಣ ದಾಖಲು ಮಾಡಿಕೊಂಡಿದ್ದು, ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಇವರ ಬಳಿ ದಾಖಲೆಯ 45 ಕೆಜಿ ಚಿನ್ನ ಹಾಗೂ 49 ಲಕ್ಷ ರೂ. ಮೌಲ್ಯದ ಎರಡು ಕಾರುಗಳಿದ್ದವು ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾವ ಕಾರಣಕ್ಕಾಗಿ ಜಗಳ ಮಾಡಿಕೊಂಡಿದ್ದರು ಎಂಬ ಮಾಹಿತಿ ವಿಚಾರಣೆ ನಂತರ ಬೆಳಕಿಗೆ ಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.