ಅಹಮದಾಬಾದ್ : 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 49 ಆರೋಪಿಗಳನ್ನು ವರ್ಚುವಲ್ ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಮುಂದಿನ ವಿಚಾರಣೆ ನಾಳೆ ನಡೆಯಲಿದೆ.
ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆ ಇಂದು ವಿಶೇಷ ನ್ಯಾಯಾಲಯದಲ್ಲಿ ನಡೆಯಿತು. 49 ಆರೋಪಿಗಳನ್ನು ವರ್ಚುವಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದಲ್ಲಿ ಎಲ್ಲ ವಾದ ಆಲಿಸಿದ ನ್ಯಾಯಾಧೀಶರು, ನಾಳೆ 11 ಗಂಟೆಗೆ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿದರು.
ಇದನ್ನೂ ಓದಿ: ನಾನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಡಿಕೆಶಿಗೆ ಜಮೀರ್ ಅಹ್ಮದ್ ತಿರುಗೇಟು
ಇಂದು ನ್ಯಾಯಾಲಯದಲ್ಲಿ ಸರ್ಕಾರಿ ವಕೀಲರ ವಾದ ಆಲಿಸಲಾಯಿತು. ವಕೀಲರು ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ತೀರ್ಪು ನೀಡುವ ನಿರೀಕ್ಷೆಯಿತ್ತು. ಆದರೆ, ಇತರ ವಾದಗಳನ್ನು ಪರಿಗಣಿಸಿ ನ್ಯಾಯಾಧೀಶರು ವಿಚಾರಣೆಯನ್ನು ನಾಳೆಗೆ ನಿಗದಿಪಡಿಸಿದರು.
ಇಂದು ಬೆಳಗ್ಗೆ ಆರಂಭವಾದ ವಿಚಾರಣೆಯಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸುವ ಕುರಿತು ಸರ್ಕಾರದ ಪರ ಹಾಗೂ ಪ್ರತಿವಾದಿಗಳ ನಡುವೆ ವಾಗ್ವಾದ ನಡೆಯಿತು. ಅಂತಿಮವಾಗಿ ನ್ಯಾಯಾಧೀಶರು ಎಲ್ಲಾ ವಾದಗಳ ಮುಂದಿನ ವಿಚಾರಣೆಯನ್ನು ನಾಳೆ ಬೆಳಗ್ಗೆ 11 ಗಂಟೆಗೆ ನಿಗದಿಪಡಿಸಿದ್ದಾರೆ.
ಜುಲೈ 26, 2008ರಂದು ಅಹಮದಾಬಾದ್ ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 56 ಜನರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಕಳೆದ 14 ವರ್ಷಗಳಿಂದ ಈ ಪ್ರಕರಣ ಕಾನೂನು ಹೋರಾಟದಲ್ಲೇ ಇದೆ.
ಘಟನೆ ಸಂಬಂಧ 78 ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದ 28 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. 49 ಆರೋಪಿಗಳಿಗೆ ಶಿಕ್ಷೆ ವಿಧಿಸುವ ಪ್ರಕ್ರಿಯೆ ನಡೆಯುತ್ತಿದೆ.