ಅಹಮದಾಬಾದ್ (ಗುಜರಾತ್): ಮಹಿಳೆಯೊಂದಿಗೆ ಅಮಾನವೀಯವಾಗಿ ವರ್ತಿಸಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ತಾಲಿಬಾನ್ ರೀತಿ ಮಹಿಳೆ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಅಹಮದಾಬಾದ್‌ನ ಸಿಂಧು ಭವನ ರಸ್ತೆಯಲ್ಲಿರುವ ಸ್ಪಾ ಮ್ಯಾನೇಜರ್ವೊಬ್ಬರು ಮಹಿಳೆಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲದೆ, ಆಕೆಯ ಕೂದಲನ್ನು ಹಿಡಿದು ಎಳೆದಾಡಿ, ಬಟ್ಟೆಯನ್ನೂ ಹರಿದಿದ್ದಾನೆ. ಸುಮಾರು 4 ನಿಮಿಷಗಳ ಕಾಲ ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾನೆ. ಹಲ್ಲೆಗೊಳಗಾದ ಮಹಿಳೆಗೆ ಮಾತನಾಡಲು ಅಥವಾ ಎದ್ದು ನಿಲ್ಲಲು ಸಹ ಸಾಧ್ಯವಾಗಿಲ್ಲ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇನ್ನೊಂದೆಡೆ, ಜಗಳ ನಡೆಯುತ್ತಿರುವ ದೃಶ್ಯವನ್ನು ಸೆಕ್ಯೂರಿಟಿ ಗಾರ್ಡ್ ಕೂಡ ನೋಡುತ್ತಾ ನಿಂತಿರುವುದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿದೆ. ವಿಡಿಯೋ ವೈರಲ್ ಆಗುತ್ತಿದಂತೆ ಈಟಿವಿ ಭಾರತದ ಜೊತೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ ಮಾಹಿತಿ ನೀಡಿದ ಬೋಡಕ್‌ದೇವ್ ಪೊಲೀಸ್ ಠಾಣೆಯ ಪಿಐ ಎಆರ್ ಧವನ್, ಪೊಲೀಸರು ವಿಡಿಯೋವನ್ನು ಸ್ವೀಕರಿಸಿದ್ದು, ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲು ಪ್ರಯತ್ನಿಸಲಾಗುತ್ತಿದೆ. ಆರೋಪಿ ಸಿಕ್ಕಿಬಿದ್ದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದರು.
ಸಾವರ್ಜನಿಕರಿಂದ ಆಕ್ರೋಶ : ಇನ್ನೊಂದೆಡೆ, ಮಹಿಳೆಯನ್ನು ಪ್ರಾಣಿಯಂತೆ ಥಳಿಸಿ, ಕೂದಲು ಹಿಡಿದು, ಬಟ್ಟೆ ಹರಿದು ಹಾಕಿದ ಸ್ಪಾ ಮ್ಯಾನೇಜರ್ ವಿಡಿಯೋ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಮ್ಯಾನೇಜರ್ ಅಮಾನವೀಯತೆ ತೋರಲು ಕಾರಣ ಏನು ಎಂಬುದು ಗೊತ್ತಾಗಿಲ್ಲ.
ಇದನ್ನೂ ಓದಿ : ಬಿಹಾರ : ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೂತ್ರ ಕುಡಿಸಿ ವಿಕೃತಿ
ಕಳೆದ ವಾರ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ : ಸಾಲ ಮರುಪಾವತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ಕುಡಿಸಿರುವ ಅಮಾನವೀಯ ಘಟನೆ ಪಾಟ್ನಾದಲ್ಲಿ ಕಳೆದ ವಾರ ನಡೆದಿತ್ತು. ಸಂತ್ರಸ್ತೆಯನ್ನು 6 ಮಂದಿ ದುಷ್ಕರ್ಮಿಗಳು ವಿವಸ್ತ್ರಗೊಳಿಸಿ ಥಳಿಸಿದ್ದಾರೆ. ಬಳಿಕ, ಬಾಯಿಯಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾರೆ. ಪಾಟ್ನಾದ ಖುಸ್ರುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ಇದನ್ನೂ ಓದಿ : ಕಳ್ಳತನ ಆರೋಪ ಹೊರಿಸಿ ಭೀಕರ ಹಲ್ಲೆ, ನೀರು ಕೇಳಿದ್ರೆ ಮೂತ್ರ ಕುಡಿಸಿ ಅಮಾನವೀಯತೆ
ಇನ್ನು ಘಟನೆಗೆ ಸಂಬಂಧಿಸಿದಂತೆ ಮಹಿಳೆಯಿಂದ ದೂರು ಸ್ವೀಕರಿಸಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಖುಸ್ರುಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ವಿವಸ್ತ್ರಗೊಳಿಸಿ ಹಲ್ಲೆ, ಲೈಂಗಿಕ ದೌರ್ಜನ್ಯ : ಪೊಲೀಸರ ವಿರುದ್ಧ ಸಂತ್ರಸ್ತ ಮಹಿಳೆಯಿಂದ ತಮಿಳುನಾಡು ಡಿಜಿಪಿಗೆ ದೂರು