ಚೆನ್ನೈ(ತಮಿಳುನಾಡು): ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಎಐಎಡಿಎಂಕೆ ಪಕ್ಷದ ಪಳನಿಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರನ್ನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಇಲ್ಲಿನ ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಸುಮಾರು ಮೂರು ಗಂಟೆಗೂ ಅಧಿಕ ಕಾಲ ನಡೆದ ಚರ್ಚೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಈವರೆಗೆ ಭಾರತಕ್ಕೆ ವಿದೇಶಗಳು ಕಳುಹಿಸಿದ ಕೋವಿಡ್ ಪರಿಹಾರ ಸಾಮಗ್ರಿ ಎಷ್ಟು ಗೊತ್ತಾ?
234 ಕ್ಷೇತ್ರಗಳ ತಮಿಳುನಾಡು ವಿಧಾನಸಭೆಯಲ್ಲಿ ಡಿಎಂಕೆ ಪಕ್ಷ 133 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದ್ದು, ಈಗಾಗಲೇ ಸ್ಟಾಲಿನ್ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸುತ್ತಿದ್ದ ಎಐಎಡಿಎಂಕೆ 66 ಸೀಟು ಗೆದ್ದಿದೆ.