ETV Bharat / bharat

ಜ. 6ರ ಡಿಎಂಕೆ ಪಕ್ಷದ ಸಮಾವೇಶಕ್ಕೆ ಓವೈಸಿ ಅವರನ್ನು ಆಹ್ವಾನಿಸಿದ ಡಿಎಂಕೆ

ಡಿಎಂಕೆ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಡಾ. ಮಸ್ತಾನ್ ಅವರು ಶುಕ್ರವಾರ ಹೈದರಾಬಾದ್‌ನ ಒವೈಸಿ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

AIMIM chief invited for DMK's conference on January 6
ಜ. 6ರ ಡಿಎಂಕೆ ಪಕ್ಷದ ಸಮಾವೇಶಕ್ಕೆ ಓವೈಸಿ ಅವರನ್ನು ಆಹ್ವಾನಿಸಿದ ಡಿಎಂಕೆ
author img

By

Published : Jan 2, 2021, 6:49 AM IST

ಹೈದರಾಬಾದ್: 2021 ರ ತಮಿಳುನಾಡು ವಿಧಾನಸಭಾ ಚುನಾವಣೆಯ ಮುನ್ನ, ಡಿಎಂಕೆ ಪಕ್ಷವು ಜನವರಿ 6 ರಂದು ಚೆನ್ನೈನಲ್ಲಿ ನಡೆಯಲಿರುವ ಪಕ್ಷದ ಸಮಾವೇಶಕ್ಕೆ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರನ್ನು ಆಹ್ವಾನಿಸಿದೆ.

ಡಿಎಂಕೆ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿ ಡಾ. ಮಸ್ತಾನ್ ಅವರು ಶುಕ್ರವಾರ ಹೈದರಾಬಾದ್‌ನ ಒವೈಸಿ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: ತಮಿಳುನಾಡು ವಿಧಾನಸಭೆ ಚುನಾವಣೆ: ಸಿಎಂ ಅಭ್ಯರ್ಥಿಯಾಗಿ ಹಾಲಿ ಸಿಎಂ ಹೆಸರು ಘೋಷಣೆ

2021 ರ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಎಐಐಎಂಐಎಂ ನವೆಂಬರ್​ ತಿಂಗಳಲ್ಲಿ ಘೋಷಿಸಿತ್ತು. ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಯು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ವಿರುದ್ಧ ಸ್ಪರ್ಧಿಸಲಿರುವ ಪ್ರಮುಖ ವಿರೋಧ ಪಕ್ಷವಾಗಿದೆ.

ಈ ಸುದ್ದಿಯನ್ನೂ ಓದಿ: 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ ನಟ ಕಮಲ್​ ಹಾಸನ್​

ಇನ್ನೂ ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಇತ್ತೀಚೆಗೆ ರಜನಿಕಾಂತ್ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಲ್ಲದೇ ನಟ, ರಾಜಕಾರಣಿ ಕಮಲ್ ಹಾಸನ್ ಕೂಡ ಚುನಾವಣೆಗೆ ಮುನ್ನ ತಮ್ಮ ಪಕ್ಷದ ಮಕ್ಕಲ್​ ನೀಧಿ ಮಾಯಂ (ಎಂಎನ್​ಎಂ) ಪರ ಪ್ರಚಾರ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.