ಸಿಲಿಗುರಿ: ವಾಯುಪಡೆಯ ಅಧಿಕಾರಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಲಿಗುರಿ ಬಳಿಯ ಬಾಗ್ಡೋಗ್ರಾ ಏರ್ ಫೋರ್ಸ್ ಬೇಸ್ ನಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಸೋಮವಾರ ಬಾಗ್ಡೋಗ್ರಾ ಏರ್ ಫೋರ್ಸ್ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ಸುರ್ಜಿತ್ ಮೆಹ್ರಾ (37) ಎಂದು ಗುರುತಿಸಲಾಗಿದೆ. ಉತ್ತರಾಖಂಡದ ಚಮೇಲಿ ನಿವಾಸಿಯಾಗಿರುವ ಸುರ್ಜೀತ್ ವಾಯುಪಡೆಯಲ್ಲಿ ಸಾರ್ಜೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಪೊಲೀಸ್ ಮತ್ತು ವಾಯುಪಡೆ ಮೂಲಗಳ ಪ್ರಕಾರ, ಸೋಮವಾರ ಮಧ್ಯಾಹ್ನ ಸೇನಾ ಬ್ಯಾರಕ್‌ನ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ವಾಯುಪಡೆ ಈ ಬಗ್ಗೆ ಬಾಗ್ಡೋಗ್ರಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ. ಪೊಲೀಸರು ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮೃತ ದೇಹವನ್ನು ಮಂಗಳವಾರದಂದು ಮರಣೋತ್ತರ ಪರೀಕ್ಷೆಗಾಗಿ ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ. ಇದು ವಾಯುಪಡೆಯ ಆಂತರಿಕ ವಿಷಯ. ಪ್ರಕರಣದ ಬಗ್ಗೆ ತನಿಖೆ ಪ್ರಾರಂಭಿಸಲಾಗಿದೆ ಎಂದು ಸಿಲಿಗುರಿ ಪೊಲೀಸ್ ಕಮಿಷನರ್ ಅಖಿಲೇಶ್ ಚತುರ್ವೇದಿ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲೂ ಭೀಕರ ಕೊಲೆ: ತಂದೆ ದೇಹವನ್ನು 30ಕ್ಕೂ ಹೆಚ್ಚು ಪೀಸ್ ಮಾಡಿ ಕೊಳವೆ ಬಾವಿಗೆ ಎಸೆದ ಮಗ!