ETV Bharat / bharat

ಏರ್​ ಇಂಡಿಯಾ ಬಂಡವಾಳ ಹಿಂಪಡೆತ ಪ್ರಕ್ರಿಯೆ ಟಾಟಾ ಪರವಾಗಿದೆ: ದೆಹಲಿ ಹೈಕೋರ್ಟ್​​ನಲ್ಲಿ ಸುಬ್ರಮಣಿಯನ್ ಸ್ವಾಮಿ ಹೇಳಿಕೆ

ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಏರ್​ ಇಂಡಿಯಾದಲ್ಲಿ ಕೇಂದ್ರ ಸರ್ಕಾರದ ಹೂಡಿಕೆ ಹಿಂಪಡೆತವನ್ನು ರದ್ದುಪಡಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿದೆ. ಈ ಕುರಿತು ಜನವರಿ 6ರಂದು ತೀರ್ಪು ಹೊರ ಬರಲಿದೆ..

Air India Disinvestment process in favour of Tata:  Subramanian Swamy to Delhi High Court
ಏರ್​ ಇಂಡಿಯಾ ಬಂಡವಾಳ ಹಿಂಪಡೆತ ಪ್ರಕ್ರಿಯೆ ಟಾಟಾ ಪರವಾಗಿದೆ: ದೆಹಲಿ ಹೈಕೋರ್ಟ್​​ನಲ್ಲಿ ಸುಬ್ರಮಣಿಯನ್ ಸ್ವಾಮಿ ಹೇಳಿಕೆ
author img

By

Published : Jan 4, 2022, 12:34 PM IST

ನವದೆಹಲಿ : ಏರ್​ ಇಂಡಿಯಾ ವಿಮಾನಯಾನ ಕಂಪನಿಯಿಂದ ಕೇಂದ್ರ ಸರ್ಕಾರ ಹೂಡಿಕೆ ಹಿಂಪಡೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯ ವಿಚಾರಣೆ ನಡೆಸಲಾಗಿದೆ.

ದೆಹಲಿ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಡಿಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಪೀಠವು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ್ದು, ಜನವರಿ 6ಕ್ಕೆ ತೀರ್ಪನ್ನು ಮುಂದೂಡಲಾಗಿದೆ.

ನಾನು ಏರ್​ ಇಂಡಿಯಾ ವಿಮಾನಯಾನ ಕಂಪನಿಯಲ್ಲಿ ಹೂಡಿಕೆ ಹಿಂಪಡೆಯುವುದರ ವಿರುದ್ಧ ಇಲ್ಲ. ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಆದರೆ, ಏರ್​ ಇಂಡಿಯಾದಲ್ಲಿ ಹೂಡಿಕೆ ಹಿಂಪಡೆಯುವ ಪ್ರಕ್ರಿಯೆ ಟಾಟಾ ಪರವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.

ಹೂಡಿಕೆ ಹಿಂಪಡೆಯುವ ಪ್ರಕ್ರಿಯೆ ಹೇಗೆ ನಡೆಯಿತು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಅವಶ್ಯಕತೆ ಇದೆ ಎಂದ ಸುಬ್ರಮಣಿಯನ್ ಸ್ವಾಮಿ, ಏರ್ ಇಂಡಿಯಾದ ಹೂಡಿಕೆ ಹಿಂಪಡೆತ ಪ್ರಕ್ರಿಯೆ ರದ್ದುಪಡಿಸಲು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಈಗ ವಿಚಾರಣೆ ಅಂತ್ಯವಾಗಿದ್ದು, ನಾಳೆಯೊಳಗೆ ಎಲ್ಲಾ ದಾಖಲೆಗಳನ್ನು ಒದಗಿಸಲು ಸೂಚನೆ ನೀಡಲಾಗಿದೆ. ಜನವರಿ 6ರಂದು ಈ ಕುರಿತ ತೀರ್ಪು ಹೊರ ಬೀಳಲಿದೆ.

ಇದನ್ನೂ ಓದಿ: India Corona: 37 ಸಾವಿರ ಹೊಸ ಕೋವಿಡ್ ಕೇಸ್​ಗಳು ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.