ಮುಂಬೈ : ನಾಗ್ಪುರದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಚೇಳು ಕಚ್ಚಿರುವ ಘಟನೆ ಎಪ್ರಿಲ್ನಲ್ಲಿ ನಡೆದಿದ್ದು, ಈ ಬಗ್ಗೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಶನಿವಾರ ಮಾಹಿತಿ ನೀಡಿದೆ. ಬಳಿಕ ಮಹಿಳಾ ಪ್ರಯಾಣಿಕರನ್ನು ವೈದ್ಯರಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ ವಿಮಾನಯಾನ ಸಂಸ್ಥೆ ತಿಳಿಸಿದೆ.
ಕಳೆದ ಎಪ್ರಿಲ್ 23ರಂದು ನಾಗ್ಪುರದಿಂದ ಮುಂಬೈಗೆ ಏರ್ ಇಂಡಿಯಾ AI 630 ವಿಮಾನದಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ವಿಮಾನದಲ್ಲಿ ಮಹಿಳಾ ಪ್ರಯಾಣಿಕರಿಗೆ ಚೇಳೊಂದು ಕಚ್ಚಿದೆ ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ. ಬಳಿಕ ಮಹಿಳಾ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ವೈದ್ಯರು ತಪಾಸಣೆ ನಡೆಸಿದರು.
ಬಳಿಕ ಹೆಚ್ಚಿನ ಚಿಕಿತ್ಸೆಗೆ ನೀಡಿ ಮಹಿಳಾ ಪ್ರಯಾಣಿಕರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಘಟನೆ ಬಳಿಕ ಏರ್ ಇಂಡಿಯಾ ವಿಮಾನದ ಇಂಜಿನಿಯರಿಂಗ್ ತಂಡವು ವಿಮಾನವನ್ನು ಪರಿಶೀಲನೆ ನಡೆಸಿದಾಗ ಚೇಳು ಪತ್ತೆಯಾಗಿದೆ ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ :ಯಾತ್ರಾರ್ಥಿಗಳ ಕಾರು ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು