ETV Bharat / bharat

Fake bomb threatening.. ಹುಸಿ ಬಾಂಬ್​ ಬೆದರಿಕೆಯಿಂದ ವಾರಣಾಸಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

ಸಾಮಾಜಿಕ ಮಾಧ್ಯವೊಂದರಲ್ಲಿ ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ವಿಮಾನದಲ್ಲಿ ಬಾಂಬ್​ ಇದೆ ಎಂಬ ಬೆದರಿಕೆ ಹಿನ್ನೆಲೆ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ವಾರಣಾಸಿಯಲ್ಲಿ ನಡೆದಿದೆ.

ಹುಸಿ ಬಾಂಬ್​ ಬೆದರಿಕೆ
ಹುಸಿ ಬಾಂಬ್​ ಬೆದರಿಕೆ
author img

By ETV Bharat Karnataka Team

Published : Sep 30, 2023, 9:54 AM IST

Updated : Sep 30, 2023, 10:25 AM IST

ವಾರಣಾಸಿ (ಉತ್ತರ ಪ್ರದೇಶ): ಹುಸಿ ಬಾಂಬ್ ಬೆದರಿಕೆಯಿಂದ ವಿಮಾನವೊಂದು ತುರ್ತಾಗಿ ಬೇರೆ ರನ್​ವೇ ಅಲ್ಲಿ ಲ್ಯಾಂಡ್​ ಆಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್‌ಲೈನ್ಸ್ ವಿಮಾನಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಬಾಂಬ್ ಬೆದರಿಕೆಯ ಸಂದೇಶ ಬಂದಿತ್ತು. ತಕ್ಷಣವೇ ಏರ್ ಟ್ರಾಫಿಕ್ ಕಂಟ್ರೋಲ್ ಬಾಂಬ್ ಬೆದರಿಕೆಯ ಬಗ್ಗೆ ವಿಮಾನದ ಕ್ಯಾಪ್ಟನ್‌ಗೆ ಮಾಹಿತಿ ನೀಡಿ, ಬಳಿಕ ಸಾಧ್ಯವಿರುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಂಡು ವಿಮಾನವನ್ನು ವಾರಣಾಸಿಯಲ್ಲಿ ಪ್ರತ್ಯೇಕ ರನ್‌ವೇಯಲ್ಲಿ ಇಳಿಸಲಾಯಿತು.

ಜತೆಗೆ ಕೂಡಲೇ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಯಿತು. ಸಿಐಎಸ್‌ಎಫ್ ಸಿಬ್ಬಂದಿ ಸುಮಾರು ಒಂದು ಗಂಟೆ ಕಾಲ ವಿಮಾನದಲ್ಲಿ ತೀವ್ರ ಶೋಧ ನಡೆಸಿದರು. ಆದರೆ ತಪಾಸಣೆ ವೇಳೆ ಏನೂ ಪತ್ತೆಯಾಗಿಲ್ಲ. ಈ ಕುರಿತು ವಾರಣಾಸಿ ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ಮಾತನಾಡಿ "ಎಲ್ಲವೂ ಸಹಜ ಸ್ಥಿತಿಯಲ್ಲಿದೆ. ಬಾಂಬ್​ ಬಗ್ಗೆ ಮಾಹಿತಿ ಸಿಕ್ಕಾಗ ವಿಮಾನ ನಿಲ್ದಾಣ ಪ್ರಾಧಿಕಾರ ಸಂಪೂರ್ಣ ಮುಂಜಾಗ್ರತೆ ವಹಿಸಿ ಪರಿಶೀಲನೆ ನಡೆಸಿದ್ದು, ಎಲ್ಲವೂ ಯಥಾಸ್ಥಿತಿಯಲ್ಲಿತ್ತು. ಈ ವಿಮಾನ ವಾರಣಾಸಿಗೆ ಮಾತ್ರ ಬರುತ್ತಿದ್ದು, ಇಲ್ಲಿಯೇ ಇಳಿಯಬೇಕಿತ್ತು. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತ್ಯೇಕ ರನ್‌ವೇಯಲ್ಲಿ ಇಳಿಸಲಾಯಿತು'' ಎಂದಿದ್ದಾರೆ.

ವಿಮಾನ ನಿಲ್ದಾಣವನ್ನು ಉಡಾಯಿಸುವುದಾಗಿ ಬಂದಿತ್ತು ಬಾಂಬ್ ಬೆದರಿಕೆ: ಸೆಪ್ಟಂಬರ್​ 8ರಂದು ವಾರಣಾಸಿಯ ಬನಾರಸ್‌ನ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉಡಾಯಿಸುವುದಾಗಿ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಹಾಕಿದ್ದನು. ಬಾಂಬ್​ ಬೆದರಿಕೆ ಕರೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಮತ್ತು ಸ್ಥಳೀಯ ಗುಪ್ತಚರ ಇಲಾಖೆ ಬಿಗಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಭದೋಹಿ ನಿವಾಸಿಯ ಯುವಕನೊಬ್ಬ ಬಾಂಬ್ ಬೆದರಿಕೆ ಹಾಕಿರುವುದಾಗಿ ಪ್ರಕರಣದ ತನಿಖೆಯಿಂದ ಬೆಳಕಿಗೆ ಬಂದಿತ್ತು. ವಿಮಾನ ನಿಲ್ದಾಣದ ಅಧಿಕಾರಿಗಳ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದ ಆ ವ್ಯಕ್ತಿ, ವಿಮಾನ ನಿಲ್ದಾಣವನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಹೇಳಿದ್ದ. ಅಲ್ಲದೇ ಸೆಪ್ಟಂಬರ್​ 9 ರ ಸಂಜೆಯ ವೇಳೆಗೆ ಈ ವಿಮಾನ ನಿಲ್ದಾಣದ ನಕ್ಷೆ ಬದಲಾಗಲಿದೆ ಎಂದು ಯುವಕ ಫೋನ್‌ನಲ್ಲಿ ಬೆದರಿಕೆ ಹಾಕಿದ್ದ.

ಇದರಿಂದ ಕಾರ್ಯಪ್ರವೃತ್ತರಾದ ವಿಮಾನ ನಿಲ್ದಾಣ ಪ್ರಾಧಿಕಾರ, ತಜ್ಞರ ತಂಡ, ಕಣ್ಗಾವಲು ಮೂಲಕ ಫೋನ್ ನಂಬರ್ ಪತ್ತೆ ಹಚ್ಚಲು ಆರಂಭಿಸಿತು. ಬಳಿಕ ಭದೋಹಿ ಎಂಬ ಪ್ರದೇಶದಿಂದ ಈ ಕರೆ ಬಂದಿರುವುದು ತನಿಖೆ ವೇಳೆ ಗೊತ್ತಾಗಿತ್ತು. ಕರೆ ಮಾಡಿದ ವ್ಯಕ್ತಿ ತನ್ನ ಹೆಸರನ್ನು ಅಶೋಕ್ ಎಂದು ಹೇಳಿಕೊಂಡಿದ್ದನು. ಇದಕ್ಕೂ ಮುನ್ನ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮಾರ್ಚ್‌ನಲ್ಲಿ ಹೋಳಿಹಬ್ಬದ ವೇಳೆಯೂ ವಿಮಾನ ನಿಲ್ದಾಣಕ್ಕೆ ಬಾಂಬ್‌ ಹಾಕುವುದಾಗಿ ಬೆದರಿಕೆ ಹಾಕಲಾಗಿತ್ತು. ವಾರಣಾಸಿ, ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರವಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಪ್ರತಿಷ್ಠಿತ ಶಾಂಗ್ರೀಲಾ ಹೋಟೆಲ್​ಗೆ ಬಾಂಬ್ ಬೆದರಿಕೆ: ದೂರು ದಾಖಲು

Last Updated : Sep 30, 2023, 10:25 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.