ನವದೆಹಲಿ: ಅಲ್ ಖೈದಾ ಭಯೋತ್ಪಾದಕ ಸಂಘಟನೆಯು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಇ-ಮೇಲ್ ಬೆದರಿಕೆ ಹಾಕಿದ್ದು, ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಸಾಕಷ್ಟು ಭದ್ರತೆ ಒದಗಿಸಲಾಗಿದೆ.
ಕರಣಬೀರ್ ಸೂರಿ ಅಲಿಯಾಸ್ ಮೊಹಮ್ಮದ್ ಜಲಾಲ್ ಮತ್ತು ಆತನ ಪತ್ನಿ ಶೈಲಿ ಶಾರಾ ಅಲಿಯಾಸ್ ಹಸೀನಾ ಭಾನುವಾರ ಅಂದರೆ ಇಂದು ಸಿಂಗಾಪುರದಿಂದ ಭಾರತಕ್ಕೆ ಬರುತ್ತಿದ್ದಾರೆ. ಅವರು ಮೂರು ದಿನಗಳ ಒಳಗೆ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಾಂಬ್ ಇಡುತ್ತಾರೆ ಎಂದು ಇ-ಮೇಲ್ನಲ್ಲಿ ಬೆದರಿಕೆ ಹಾಕಲಾಗಿದೆ.
ಈ ಕುರಿತು ವಿಮಾನ ನಿಲ್ದಾಣದ ಪೊಲೀಸ್ ಠಾಣೆಯ ಸಿಬ್ಬಂದಿ ವಿಮಾನ ನಿಲ್ದಾಣದ ಕಾರ್ಯಾಚರಣೆಗಳ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್ಪೋರ್ಟ್ಗೆ ಸಾಕಷ್ಟು ಭದ್ರತೆಯನ್ನು ಒದಗಿಸಲಾಗಿದೆ. ವಿಮಾನ ನಿಲ್ದಾಣದ ಎಲ್ಲಾ ಟರ್ಮಿನಲ್ಗಳಲ್ಲಿ ಮತ್ತು ಪ್ರವೇಶ ದ್ವಾರಗಳಲ್ಲಿ ಪೊಲೀಸರ ಗಸ್ತನ್ನು ತೀವ್ರಗೊಳಿಸಲಾಗಿದೆ.
ಇದನ್ನೂ ಓದಿ: Covid-19 Update: ಕಳೆದ 24 ಗಂಟೆಯಲ್ಲಿ 39,070 ಹೊಸ ಕೊರೊನಾ ಪ್ರಕರಣ ಪತ್ತೆ