ETV Bharat / bharat

ಕುಡಿದ ಮತ್ತಿನಲ್ಲಿ ಯುವತಿಗೆ ಕಿರುಕುಳ, ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ! - ಮಧ್ಯದ ನಶೆಯಲ್ಲಿ ಯುವತಿಗೆ ಕಿರುಕುಳ

ಮಧ್ಯಪ್ರದೇಶದ ಜಬಲ್ಪುರ್​ದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಕಿರುಕುಳ ನೀಡಿ, ಥಳಿಸಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Jabalpur latest news
Jabalpur latest news
author img

By

Published : Mar 3, 2021, 3:23 PM IST

Updated : Mar 3, 2021, 3:50 PM IST

ಜಬಲ್ಪುರ್ ​(ಮಧ್ಯಪ್ರದೇಶ): ಕಂಠಪೂರ್ತಿ ಕುಡಿದ ಮತ್ತಿನಲ್ಲಿ ಯುವಕನೋರ್ವ ಯುವತಿಗೆ ಕಿರುಕುಳ ನೀಡಿ, ಥಳಿಸಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ್​​ದಲ್ಲಿ ನಡೆದಿದ್ದು, ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕುಡಿದ ಮತ್ತಿನಲ್ಲಿ ಯುವಕನಿಂದ ಯುವತಿಗೆ ಕಿರುಕುಳ

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ. ಗಣೇಶಗಂಜ್​ ಪ್ರದೇಶದಲ್ಲಿ ವಾಸವಾಗಿದ್ದ ಕೆಲ ದುಷ್ಕರ್ಮಿಗಳು ಅಕ್ರಮವಾಗಿ ಮದ್ಯ ಮಾರಾಟ ಕೆಲಸದಲ್ಲಿ ಭಾಗಿಯಾಗಿದ್ದು, ಇದರ ಬಗ್ಗೆ ಯುವತಿ ಪ್ರಶ್ನೆ ಮಾಡಿದ್ದಾಳೆ.

ಇದರಿಂದ ಆಕ್ರೋಶಗೊಂಡಿರುವ ಯುವಕನೋರ್ವ ಕಂಠಪೂರ್ತಿ ಕುಡಿದು ಆಕೆಗೆ ಕಿರುಕುಳ ನೀಡಿದ್ದು, ಹಲ್ಲೆ ಕೂಡ ನಡೆಸಿದ್ದಾನೆ. ಈ ವೇಳೆ ಯುವತಿಯ ಕುಟುಂಬದವರು ಆಕೆಯ ರಕ್ಷಣೆಗೆ ಧಾವಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ದೂರು ದಾಖಲು ಮಾಡಲಾಗಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸ್ ಸೂಪರಿಂಟೆಂಡೆಂಟ್​ ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ. ಆದರೂ ಇಲ್ಲಿಯವರೆಗೆ ಅವರಿಗೆ ಯಾವುದೇ ನ್ಯಾಯ ಸಿಕ್ಕಿಲ್ಲ.

ಇದನ್ನೂ ಓದಿ: ಅನುರಾಗ್ ಕಶ್ಯಪ್​, ತಾಪ್ಸಿ ಸೇರಿದಂತೆ ಬಾಲಿವುಡ್​ ಸೆಲಬ್ರಿಟಿಗಳ ಮನೆ ಮೇಲೆ ಐಟಿ ದಾಳಿ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್​ ಚೌಹಾಣ್​ ಇಲ್ಲಿನ ಮಹಿಳೆಯರಿಗೆ ರಕ್ಷಣೆ ನೀಡುವ ಭರವಸೆ ನೀಡಿದ್ದಾರೆ. ಆದರೆ ನಮಗೆ ಇಲ್ಲಿಯವರೆಗೆ ನ್ಯಾಯ ಸಿಕ್ಕಿಲ್ಲ ಎಂದು ಯುವತಿ ಕುಟುಂಬಸ್ಥರು ಆರೋಪಿಸಿದ್ದಾರೆ.

Last Updated : Mar 3, 2021, 3:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.