ಲಖನೌ (ಉತ್ತರ ಪ್ರದೇಶ): ಇನ್ನೂ ಜೀವಂತವಾಗಿದ್ದ ಮಹಿಳೆಯನ್ನು ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿರುವ ಘಟನೆ ಉತ್ತರ ಪ್ರದೇಶದ ಲಖನೌನ ಡಾ.ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ನಡೆದಿದೆ.
ಘಟನೆಯ ವಿವರ
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ವರದಿ ನೆಗೆಟಿವ್ ಬಂದಿದೆ. ಉಸಿರಾಟದ ಸಮಸ್ಯೆಯಿದೆಯೆಂದು ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ನಿನ್ನೆ ದೇಹದಲ್ಲಿ ಆಮ್ಲಜನಕದ ಮಟ್ಟ ಕಡಿಮೆ ಇದ್ದುದರಿಂದ ರೋಗಿ ಸಾವನ್ನಪ್ಪಿದ್ದಾರೆಂದು, ಮೃತದೇಹವನ್ನು ಮಹಿಳೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು.
ಇದನ್ನೂ ಓದಿ: ಸತ್ತ ಮಹಿಳೆ ಅಂತ್ಯ ಸಂಸ್ಕಾರ ಮಾಡಲು ಹೋಗುವಾಗ ಮತ್ತೇ ಜೀವಂತ: ಎರಡು ಬಾರಿ ಸಾವಿಗೀಡಾದ ಮಹಿಳೆ!
ಅಂತ್ಯಕ್ರಿಯೆಗೆಂದು ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯುವಾಗ ಮಹಿಳೆ ಉಸಿರಾಡುತ್ತಿದ್ದರು. ಇದನ್ನು ಕುಟುಂಬದ ಸದಸ್ಯರು ಗಮನಿಸಿದ್ದಾರೆ. ಈ ವೇೆ ಆಘಾತಗೊಂಡ ಅವರು ಮತ್ತೆ ವೈದ್ಯರ ಬಳಿ ಕರೆದೊಯ್ದಿದ್ದಾರೆ. ವೈದ್ಯರ ನಿರ್ಲಕ್ಷ್ಯ ಆರೋಪ ಹೊರಿಸಿರುವ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಕೆಂಡಾಮಂಡಲರಾದರು.