ETV Bharat / bharat

ಸಂಸತ್ತಿನ ಮುಂಗಾರು​ ಅಧಿವೇಶನ: ಇಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ - ಇಂದು ಸರ್ವಪಕ್ಷಗಳ ಸಭೆ

ನಾಳೆಯಿಂದ ಸಂಸತ್ತಿನ​ ಮುಂಗಾರು ಅಧಿವೇಶನ ನಡೆಯಲಿದ್ದು ಕೇಂದ್ರ ಸರ್ಕಾರ ಇಂದು ಸರ್ವ ಪಕ್ಷಗಳ ಸಭೆ ಕರೆದಿದೆ.

Monsoon Session
ಇಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ
author img

By

Published : Jul 17, 2022, 9:37 AM IST

ನವದೆಹಲಿ: ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕೇಂದ್ರ ಸರ್ಕಾರ ಇಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದೆ. ಅಧಿವೇಶನದ ದಿಕ್ಸೂಚಿ ಮತ್ತು ಪ್ರತಿಪಕ್ಷಗಳು ಚರ್ಚಿಸಲು ಬಯಸುವ ವಿಚಾರಗಳ ಬಗ್ಗೆ ತಿಳಿದುಕೊಳ್ಳಲು ಸಭೆ ಪೂರಕವಾಗಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ಸಭೆ ಕರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸುವ ಸಾಧ್ಯತೆಯಿದೆ. ಸದನದ ಗರಿಷ್ಠ ಪ್ರಮಾಣದ ಉತ್ಪಾದಕತೆ, ಆರೋಗ್ಯಕರ ಚರ್ಚೆ, ಪ್ರತಿಪಕ್ಷಗಳ ಕಳವಳ ಮತ್ತು ಸರ್ಕಾರದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಮಾತುಕತೆ ನಡೆಯಲಿದೆ.

ಪ್ರಸಕ್ತ ಅಧಿವೇಶನದಲ್ಲಿ ಸಶಸ್ತ್ರ ಪಡೆಗಳಿಗೆ ಅಗ್ನಿವೀರರ ನೇಮಿಸುವ ಅಗ್ನಿಪಥ್ ಯೋಜನೆ, ನಿರುದ್ಯೋಗ, ಹಣದುಬ್ಬರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರತಿಪಕ್ಷಗಳು ಪ್ರಸ್ತಾಪಿಸುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಮುಂಗಾರು ಅಧಿವೇಶನದಲ್ಲಿ ಹಲವಾರು ಶಾಸನಗಳನ್ನು ಮಂಡಿಸುವ ಇರಾದೆ ಹೊಂದಿದೆ.

ವಿವಿಧ ಮಸೂದೆಗಳ ಮಂಡನೆ: ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಅಂತರರಾಜ್ಯ ನದಿ ನೀರು ವಿವಾದಗಳ (ತಿದ್ದುಪಡಿ) ಮಸೂದೆ, ಸಾಮೂಹಿಕ ವಿನಾಶದ ಶಸ್ತ್ರಾಸ್ತ್ರಗಳು ಮತ್ತು ಅವುಗಳ ವಿತರಣಾ ವ್ಯವಸ್ಥೆಗಳು (ಕಾನೂನುಬಾಹಿರ ಚಟುವಟಿಕೆಗಳ ನಿಷೇಧ) ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಬೇಕಿದೆ. ಲೋಕಸಭೆಯಲ್ಲಿ ಬಾಕಿ ಉಳಿದಿರುವ ಇಂಡಿಯನ್ ಅಂಟಾರ್ಟಿಕಾ ಬಿಲ್- 2022, ವನ್ಯಜೀವಿ (ರಕ್ಷಣೆ) ತಿದ್ದುಪಡಿ ಮಸೂದೆ-2021, 2019ರ ಕಡಲ ಕಳ್ಳತನ ವಿರೋಧಿ ಮಸೂದೆ ಮತ್ತು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಮಸೂದೆಗಳ ಅಂಗೀಕಾರಕ್ಕೂ ಸರ್ಕಾರ ಸಿದ್ಧತೆ ನಡೆಸಿದೆ. ಮಾನ್ಸೂನ್ ಅಧಿವೇಶನದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ-2022, ಕೌಟುಂಬಿಕ ನ್ಯಾಯಾಲಯಗಳ (ತಿದ್ದುಪಡಿ) ಕಾಯ್ದೆಯಂತಹ ಹೊಸ ಮಸೂದೆಗಳನ್ನು ಸಂಸತ್ತಿಗೆ ಪರಿಚಯಿಸಲಾಗುತ್ತದೆ.

ರಾಷ್ಟ್ರಪತಿ ಚುನಾವಣೆ: ಇದಲ್ಲದೇ, ಅಧಿವೇಶನದ ನಡುವೆಯೇ ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿರುವುದರಿಂದ ಮುಂಗಾರು ಅಧಿವೇಶನವು ಅತ್ಯಂತ ಮಹತ್ವದ್ದಾಗಿದೆ. ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದ್ದು, ಉಪ ರಾಷ್ಟ್ರಪತಿ ಚುನಾವಣೆ ಆಗಸ್ಟ್ 6 ರಂದು ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ಕ್ಕೆ ಕೊನೆಗೊಳ್ಳಲಿದೆ.

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಪ್ರತಿಪಕ್ಷಗಳು ಇಂದು ನಿರ್ಧರಿಸಲಿದ್ದು, ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ಎಂದು ಬಿಜೆಪಿ ಶನಿವಾರ ಘೋಷಿಸಿದೆ.

ಇದನ್ನೂ ಓದಿ: ಕೌಂಟ್‌ಡೌನ್‌! 2 ಬಿಲಿಯನ್ ವ್ಯಾಕ್ಸಿನ್‌ ಡೋಸ್‌ ವಿತರಣೆಯತ್ತ ಭಾರತ ಹೆಜ್ಜೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.