ನವದೆಹಲಿ : ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ಪಡೆಯಲು ಅರ್ಹತೆ ಇದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಕೇಂದ್ರ ಕ್ಯಾಬಿನೆಟ್ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಸುದ್ದಿಗಾರರಿಗೆ ತಿಳಿಸಿದ ಅವರು, ಕೊಮೊರ್ಬಿಡಿಟಿ ಇಲ್ಲದ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಜನರು ಸಹ ಲಸಿಕೆ ಪಡೆಯಬಹುದು. ಕೋವಿಡ್ ಡೋಸ್ ತೆಗೆದುಕೊಳ್ಳಲು ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಅರ್ಹರಿಗೆ ಮನವಿ ಮಾಡಿದರು.
ಇದನ್ನೂ ಓದಿ: ಅಲ್ಟ್ರಾ-ಹೈ ಡೆಫಿನಿಷನ್ ಮಾನಿಟರ್ ಬಿಡುಗಡೆ ಮಾಡಿದ ಸ್ಯಾಮ್ಸಂಗ್: ದರ ಎಷ್ಟು ಗೊತ್ತಾ?
ಆರೋಗ್ಯ ಕಾರ್ಯಕರ್ತರಿಗೆ ಚುಚ್ಚುಮದ್ದನ್ನು ನೀಡುವುದರೊಂದಿಗೆ ಜನವರಿ 16ರಂದು ದೇಶಾದ್ಯಂತ ವ್ಯಾಕ್ಸಿನೇಷನ್ ಚಾಲನೆ ನೀಡಲಾಯಿತು ಮತ್ತು ಫೆಬ್ರವರಿ 2ರಿಂದ ಮುಂಚೂಣಿ ಕಾರ್ಮಿಕರಿಗೆ ಲಸಿಕೆ ನೀಡಲು ಪ್ರಾರಂಭಿಸಲಾಯಿತು.