ಲಕ್ನೋ (ಉತ್ತರ ಪ್ರದೇಶ): ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸುವುದರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಅಯೋಧ್ಯೆಯ ನಿವಾಸಿಗಳಾದ ಹಾಜಿ ಮಹಮೂದ್ ಅಹ್ಮದ್ ಮತ್ತು ಸೈಯದ್ ಅಖ್ಲಾಕ್ ಅಹ್ಮದ್ ಅವರು ಜನವರಿ 8 ರಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಲಖನೌ ನ್ಯಾಯಪೀಠ ವಿಚಾರಣೆ ನಡೆಸಲಿದೆ.
ಅವರ ವಕೀಲರಾಗಿರುವ ಜಫರ್ಯಾಬ್ ಜಿಲಾನಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯನಿರ್ವಾಹಕ ಸದಸ್ಯರಾಗಿದ್ದು, ಬಾಬ್ರಿ ಮಸೀದಿ ಕ್ರಿಯಾ ಸಮಿತಿಯ ಕನ್ವೀನರ್ ಆಗಿದ್ದಾರೆ.
ಕಳೆದ ವರ್ಷ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರಾಕೇಶ್ ಶ್ರೀವಾಸ್ತವ ಅವರ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗಿದೆ.