ETV Bharat / bharat

ಪ್ರೀತಿಸಿ ಅಂತರ್ಜಾತಿ ವಿವಾಹವಾದ ಯುವಕನ ಹತ್ಯೆ - ಪ್ರೀತಿಸಿ ಅಂತರಜಾತಿ ವಿವಾಹವಾದ ಯುವಕನ ಹತ್ಯೆ

ಪ್ರೀತಿಸಿ ಅಂತರ್ಜಾತಿ ವಿವಾಹವಾದ ಮೂರು ತಿಂಗಳಲ್ಲೇ ಯುವಕನನ್ನು ಹುಡುಗಿಯ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯುವಕನ ಹತ್ಯೆ
ಯುವಕನ ಹತ್ಯೆ
author img

By

Published : Dec 26, 2020, 1:03 PM IST

ಪಾಲಕ್ಕಾಡ್: ಕುಟುಂಬಸ್ಥರ ವಿರೋಧದ ನಡುವೆಯೂ ಅಂತರ್ಜಾತಿ ವಿವಾಹವಾದ ಹಿನ್ನೆಲೆ ಯುವಕನನ್ನು ಹತ್ಯೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ.

ಅನೀಶ್‌ (29) ಹತ್ಯೆಯಾದ ಪ್ರೇಮಿ. ಈತ ತಾನು ಪ್ರೀತಿಸಿದ ಹುಡುಗಿಯನ್ನು ಮೂರು ತಿಂಗಳ ಹಿಂದೆ ಮದುವೆಯಾಗಿದ್ದನು. ಆದರೆ ಅನೀಶ್‌ ಕುಟುಂಬ ಆರ್ಥಿಕವಾಗಿ ದುರ್ಬಲವಾಗಿದ್ದ ಹಿನ್ನೆಲೆ ಮತ್ತು ಬೇರೆ ಜಾತಿಯಾದ ಕಾರಣ ಈ ವಿವಾಹಕ್ಕೆ ಹುಡುಗಿಯ ಕುಟುಂಬಸ್ಥರು ಒಪ್ಪಿಗೆ ನೀಡಿರಲಿಲ್ಲ.

ಈ ಹಿಂದೆ ಕೂಡ ಹಲವು ಬಾರಿ ಅನೀಶ್ ಹೆಂಡತಿಯ ಸಂಬಂಧಿಕರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದು, ಕೊಲೆಗೆ ಸಂಚು ರೂಪಿಸಿದ್ದರು. ಶುಕ್ರವಾರ ವಾಹನದಲ್ಲಿ ಬಂದು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ತಂದೆ ಪ್ರಭುಕುಮಾರ್ ಮತ್ತು ಅವರ ಚಿಕ್ಕಪ್ಪ ಸುರೇಶ್ ಅವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.