ನವದೆಹಲಿ: ದೇಶದಲ್ಲಿ 2ನೇ ಹಂತದ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪತ್ರ ಬರೆದಿದ್ದು, ಕೆಲವೊಂದು ಮಹತ್ವದ ಸೂಚನೆ ನೀಡಿದ್ದಾರೆ. ಕೋವಿಡ್ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಹೊಸ ಲಸಿಕೆಗಳಿಗೆ ತ್ವರಿತ ಅನುಮೋದನೆ ನೀಡುವಂತೆ ತಿಳಿಸಿದ್ದು, ಲಸಿಕೆ ನೀಡುವ ವಯಸ್ಸಿನಲ್ಲಿ ಬದಲಾವಣೆ ಮಾಡಿ, ಜನರ ಅರ್ಹತೆ ಆಧಾರದ ಮೇಲೆ ವ್ಯಾಕ್ಸಿನ್ ನೀಡುವಂತೆ ತಿಳಿಸಿದ್ದಾರೆ.
ಮಹಾರಾಷ್ಟ್ರ ಆಡಳಿತ ಸರ್ಕಾರ ಇರುವ ರಾಜ್ಯಗಳೊಂದಿಗೆ ಸೋನಿಯಾ ಗಾಂಧಿ ಚರ್ಚೆ ನಡೆಸಿದ್ದು, ಇದರಲ್ಲಿ ಪ್ರಮುಖವಾಗಿ ಕೇವಲ ಮೂರರಿಂದ ಐದು ದಿನಗಳಿಗೆ ಆಗುವಷ್ಟು ಲಸಿಕೆ ದಾಸ್ತಾನು ಇದೆ ಎಂಬ ಮಾಹಿತಿ ತಿಳಿದು ಬಂದಿದೆ ಎಂದಿದ್ದಾರೆ.
ವೆಂಟಿಲೇಟರ್, ಆಕ್ಸಿಮೀಟರ್ ಮತ್ತು ಆಮ್ಲಜನಕ ಸಿಲಿಂಡರ್ ಸೇರಿದಂತೆ ಮೆಡಿಕಲ್ ಔಷಧ ಮತ್ತು ಸಲಕರಣೆಗಳ ಮೇಲಿನ ಜಿಎಸ್ಟಿ ತೆಗೆದು ಹಾಕುವಂತೆ ತಿಳಿಸಿದ್ದಾರೆ. ಕಳೆದ ವರ್ಷ ವಿಧಿಸಲಾಗಿರುವ ಲಾಕ್ಡೌನ್ನಿಂದ ಬಡವರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದು, ಆರ್ಥಿಕ ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಿರುವ ಕಾರಣ ಸಂಕಷ್ಟಕ್ಕೊಳಗಾಗಿದ್ದಾರೆ. ಅವರಿಗೆ ಮಾಸಿಕ ಖಾತರಿ ಆದಾಯ ಯೋಜನೆ ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ನಡೆದುಕೊಂಡು ಹೋಗ್ತಿದ್ದ ವೈದ್ಯ ದಂಪತಿ ಮೇಲೆ ಹರಿದ ಕಾರು.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಈಗಾಗಲೇ ಕೇಂದ್ರ ಸರ್ಕಾರದ ವಿರುದ್ಧ ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳು ವ್ಯಾಕ್ಸಿನೇಷನ್ ಕೊರತೆ ಇರುವ ವಿಚಾರವಾಗಿ ಆಕ್ರೋಶ ಹೊರಹಾಕಿದ್ದು, ದೇಶದಲ್ಲಿ ಉದ್ಭವವಾರುವ ಈ ಕೊರತೆ ಸರಿಪಡಿಸುವಂತೆ ತಿಳಿಸಿದ್ದಾರೆ.