ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಸೀತಾಪುರದಲ್ಲಿ ನಿಯಂತ್ರಣ ಕಳೆದುಕೊಂಡ ಆ್ಯಂಬುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಆ್ಯಂಬುಲೆನ್ಸ್ ಮರಕ್ಕೆ ಡಿಕ್ಕಿ ಹೊಡೆಯುತ್ತಿದ್ದಂತೆ ಅದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ನಂತರ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಂತರ ಅದರಲ್ಲಿದ್ದ ಗರ್ಭಿಣಿಯನ್ನ ಹೊರಕ್ಕೆ ತರಲಾಗಿದೆ. ಆದರೆ, ಆಕೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾನೆ.
ಸೀತಾಪುರ್ ಜಿಲ್ಲೆಯ ಮಹಮೂದಾಬಾದ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಆ್ಯಂಬುಲೆನ್ಸ್ಗೆ ಬೆಂಕಿ ಹತ್ತಿರುವ ಮಾಹಿತಿ ಗೊತ್ತಾಗುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಿಯಂತ್ರಿಸಿದೆ.