ಅಂಗುಲ್ (ಒಡಿಶಾ): ಆ್ಯಂಬುಲೆನ್ಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಜರಪಾಡಾ ಚಾಕ್ ಬಳಿ ಎನ್‌ಎಚ್ -55 ಹೆದ್ದಾರಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಬುರ್ಲಾದಿಂದ ಏಳು ಜನರನ್ನು ಆ್ಯಂಬುಲೆನ್ಸ್ನಲ್ಲಿ ಕಟಕ್ಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನು ದುರ್ಘಟನೆಯಲ್ಲಿ ಗಾಯಗೊಂಡ ಮೂವರು ಗಾಯಾಳುಗಳನ್ನು ಅಂಗುಲ್ ಜಿಲ್ಲೆಯ ಕೇಂದ್ರೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಓದಿ: ರಾಜಸ್ಥಾನದಲ್ಲಿ ಮಣ್ಣಿನ ದಿಬ್ಬ ಕುಸಿದು ಮೂರು ಮಕ್ಕಳು ಸಾವು
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರಕ್ ಮತ್ತು ಚಾಲಕನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.