ETV Bharat / bharat

ರಾಜೀನಾಮೆ ನೀಡಿದ ಶಾಸಕರು 5 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ತಡೆ ಕೋರಿ ಅರ್ಜಿ ಸಲ್ಲಿಕೆ

ಸಂವಿಧಾನದ 1ನೇ ಶೆಡ್ಯೂಲ್ ಅಡಿ ಸದನದ ಸದಸ್ಯರಾಗಿ ಅನರ್ಹಗೊಂಡ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಮರು ಸ್ಪರ್ಧಿಸದಂತೆ ಹಾಗೂ ಅವರನ್ನ 5 ವರ್ಷಗಳ ವರೆಗೆ ಡಿಬಾರ್ ಮಾಡುವಂತೆ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ ಅರ್ಜಿಗೆ ಶೀಘ್ರ ಪರಿಹಾರ ನೀಡುವಂತೆ ಒತ್ತಾಯಿಸಿ ಹೊಸ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
author img

By

Published : Jun 23, 2022, 7:20 AM IST

ನವದೆಹಲಿ: ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಅನರ್ಹಗೊಂಡಿರುವ ಅಥವಾ ರಾಜೀನಾಮೆ ನೀಡಿದ ಶಾಸಕರು ತಮ್ಮ ರಾಜೀನಾಮೆ ನೀಡಿದ ಅಥವಾ ಅನರ್ಹಗೊಂಡ ದಿನಾಂಕದಿಂದ ಐದು ವರ್ಷಗಳವರೆಗೆ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸಂವಿಧಾನದ 1ನೇ ಶೆಡ್ಯೂಲ್ ಅಡಿ ಸದನದ ಸದಸ್ಯರಾಗಿ ಅನರ್ಹಗೊಂಡ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಮರು ಸ್ಪರ್ಧಿಸದಂತೆ ಹಾಗೂ ಅವರನ್ನ 5 ವರ್ಷಗಳವರೆಗೆ ಡಿಬಾರ್ ಮಾಡುವಂತೆ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು 2021 ರಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆ ಶೀಘ್ರ ಪರಿಹಾರ ನೀಡುವಂತೆ ಒತ್ತಾಯಿಸಿ ಹೊಸ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ.

ಜನವರಿ 7, 2021 ರಂದು ನೋಟಿಸ್ ನೀಡಲಾಗಿದ್ದರೂ ಈ ಕುರಿತು ಕೇಂದ್ರ ಸರ್ಕಾರ ಮತ್ತು ಭಾರತದ ಚುನಾವಣಾ ಆಯೋಗವು ಇಲ್ಲಿಯವರೆಗೆ ಯಾವುದೇ ಪ್ರತಿ ಅಫಿಡೆವಿಟ್‌ ಸಲ್ಲಿಸಿಲ್ಲ. ರಾಜಕೀಯ ಪಕ್ಷಗಳು ಈ ಪರಿಸ್ಥಿತಿಯ ಅನಾನುಕೂಲತೆಯನ್ನ ಪಡೆದುಕೊಂಡು ವಿವಿಧ ರಾಜ್ಯಗಳಲ್ಲಿ ಚುನಾಯಿತ ಸರ್ಕಾರವನ್ನು ನಿರಂತರವಾಗಿ ನಾಶಪಡಿಸುತ್ತಿವೆ.

ಮಹಾರಾಷ್ಟ್ರದಲ್ಲಿ ಸಹ ಇದು ಪುನರಾವರ್ತನೆಯಾಗಿದೆ. ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ವವನ್ನ ನಾಶಮಾಡಲು ಪ್ರಯತ್ನಿಸುತ್ತಿವೆ. ಆದ್ದರಿಂದ ನ್ಯಾಯಾಲಯ ತಕ್ಷಣ ಈ ಕುರಿತು ನಿರ್ದೇಶನ ನೀಡುವುದು ಅವಶ್ಯಕವಾಗಿದೆ ಎಂದು ಅರ್ಜಿಯಲ್ಲಿ ಠಾಕೂರ್​ ಒತ್ತಾಯಿಸಿದ್ದಾರೆ.

ಮಣಿಪುರ, ಕರ್ನಾಟಕ, ಮಧ್ಯಪ್ರದೇಶದಂತಹ ವಿವಿಧ ರಾಜ್ಯಗಳಲ್ಲಿ ಶಾಸಕರ ಅನರ್ಹತೆ ಅಥವಾ ರಾಜೀನಾಮೆಯ ವಿವಿಧ ನಿದರ್ಶನಗಳನ್ನು ಉಲ್ಲೇಖಿಸಿರುವ ಠಾಕೂರ್, ಇಂತಹ ಪ್ರಜಾಪ್ರಭುತ್ವ ವಿರೋಧಿ ಆಚರಣೆಗಳು ನಮ್ಮ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಅಣಕಿಸುತ್ತಿವೆ ಎಂದು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಲಗೇಜುಗಳ ಸಮೇತ ಮುಖ್ಯಮಂತ್ರಿಗಳ ಅಧಿಕೃತ ಬಂಗಲೆ ತೊರೆದ ಉದ್ಧವ್ ಠಾಕ್ರೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.