ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಒಮಿಕ್ರಾನ್ ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಒಮಿಕ್ರಾನ್ ಕಾಣಿಸಿಕೊಂಡಿರುವ ಸುಮಾರು ಹತ್ತು ರಾಜ್ಯಗಳಿಗೆ ತಜ್ಞರ ತಂಡಗಳನ್ನು ಕಳುಹಿಸಿ, ವರದಿ ಸಂಗ್ರಹಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.
ಸದ್ಯಕ್ಕೆ 10 ರಾಜ್ಯಗಳಿಗೆ ತಜ್ಞರ ತಂಡವನ್ನು ಕಳುಹಿಸಲಾಗುತ್ತದೆ. ಒಮಿಕ್ರಾನ್ ಹರಡುತ್ತಿರುವ, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಮತ್ತು ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣ ಕಡಿಮೆ ಇರುವ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡು, ಆ ರಾಜ್ಯಗಳಿಗೆ ತಂಡಗಳನ್ನು ಕಳುಹಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಈ ತಂಡಗಳು ಕರ್ನಾಟಕ, ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಮಿಜೋರಾಂ, ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಪಂಜಾಬ್‌ಗಳಲ್ಲಿ ಮೂರರಿಂದ ಐದು ದಿನಗಳ ಕಾಲ ಬೀಡು ಬಿಡಲಿದ್ದು, ಆಯಾ ರಾಜ್ಯ ಆರೋಗ್ಯ ಪ್ರಾಧಿಕಾರಗಳೊಂದಿಗೆ ಕೆಲಸ ಮಾಡಲಿವೆ.
ಈ ತಂಡಗಳು ಮೂರರಿಂದ ಐದು ದಿನಗಳ ಕಾಲ ರಾಜ್ಯಗಳಲ್ಲಿ ಠಿಕಾಣಿ ಹೂಡುತ್ತವೆ ಮತ್ತು ರಾಜ್ಯ ಆರೋಗ್ಯ ಪ್ರಾಧಿಕಾರಗಳೊಂದಿಗೆ ಕೆಲಸ ಮಾಡುತ್ತವೆ. ಜೀನೋಮ್ ಸೀಕ್ವೆನ್ಸಿಂಗ್, ಕೋವಿಡ್ ಪರೀಕ್ಷೆ, ಕಂಟೈನ್ಮೆಂಟ್ ಝೋನ್ ಮುಂತಾದ ವಿಚಾರಗಳ ಬಗ್ಗೆ ಈ ತಂಡಗಳು ವರದಿ ಸಲ್ಲಿಸಲಿವೆ.
ಇದರೊಂದಿಗೆ ಕೋವಿಡ್ ಮಾರ್ಗಸೂಚಿಗಳ ಜಾರಿ, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ, ಆ್ಯಂಬುಲೆನ್ಸ್ಗಳು, ವೆಂಟಿಲೇಟರ್‌ಗಳು ಮತ್ತು ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಪ್ರಮಾಣ ಹೆಚ್ಚಿಸಲು ಸಲಹೆ ಸೂಚನೆಗಳನ್ನು ನೀಡುವ ಕೆಲಸವನ್ನು ಈ ತಂಡಗಳು ಮಾಡಲಿವೆ.
ಇದನ್ನೂ ಓದಿ: ದೇಶದಲ್ಲಿ ಹೊಸದಾಗಿ 7,189 ಕೋವಿಡ್ ಕೇಸ್ ಪತ್ತೆ: ಏರುತ್ತಲೇ ಇದೆ ಒಮಿಕ್ರಾನ್ ಸೋಂಕು