ನವದೆಹಲಿ: ಕೋವಿಡ್ ಸೋಂಕಿತರ ಸಂಖ್ಯೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮತ್ತೊಂದೆಡೆ ಒಮಿಕ್ರಾನ್ ಭೀತಿಯೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನೈಟ್ ಕರ್ಫ್ಯೂಗೆ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಆದೇಶಿಸಿದೆ.
ಸೋಮವಾರದಿಂದ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿ ಮಾಡಿ, ಆದೇಶ ಹೊರಡಿಸಲಾಗಿದ್ದು, ಹೆಚ್ಚುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆಯನ್ನು ಇಳಿಮುಖಗೊಳಿಸಲು ಹಾಗೂ ನಿಯಂತ್ರಣಕ್ಕೆ ತರಲು ದೆಹಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 290ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಜೂನ್ 10ರಿಂದ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳೊಂದಿಗೆ 1,103 ಕ್ಕೆ ಏರಿದೆ. ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ದೆಹಲಿಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 25,105ಕ್ಕೆ ತಲುಪಿದೆ.
ಈಗಾಗಲೇ ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿಯಾಗಿದೆ. ಉತ್ತರ ಪ್ರದೇಶ, ಹರಿಯಾಣ, ಗುಜರಾತ್ನಲ್ಲೂ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಸಮಯದ ವಿಚಾರದಲ್ಲಿ ಅಲ್ಪಸ್ವಲ್ಪ ಬದಲಾವಣೆಯಿದೆ.
ಇದನ್ನೂ ಓದಿ: ಕತ್ತು ಸೀಳಿದ ಚೀನಾದ ಮಾಂಜಾ.. ಒಡಿಶಾದಲ್ಲಿ ಯುವಕ ಸಾವು