ನವದೆಹಲಿ : ಛತ್ತೀಸ್‌ಗಢದಲ್ಲಿ ನಡೆದ ನಕ್ಸಲ್ ದಾಳಿ ಹಿನ್ನೆಲೆ ಅಸ್ಸೋಂ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಪ್ರಚಾರ ಮೊಟಕುಗೊಳಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ತೆರಳಿದ್ದಾರೆ.
ಅಸ್ಸೋಂನಲ್ಲಿಂದು ಮೂರು ಚುನಾವಣಾ ರ‍್ಯಾಲಿಗಳಲ್ಲಿ ಅಮಿತ್ ಶಾ ಪಾಲ್ಗೊಳ್ಳಬೇಕಿತ್ತು. ಆದರೆ, ಛತ್ತೀಸ್‌ಗಢದಲ್ಲಿನ ನಕ್ಸಲರ ದಾಳಿ ಗಮನದಲ್ಲಿಟ್ಟುಕೊಂಡು ರಾಷ್ಟ್ರ ರಾಜಧಾನಿಗೆ ಮರಳಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಅಸ್ಸೋಂ ಚುನಾವಣೆಯ ಸಹ ಉಸ್ತುವರಿ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
-
I bow to the sacrifices of our brave security personnel martyred while fighting Maoists in Chhattisgarh. Nation will never forget their valour. My condolences are with their families. We will continue our fight against these enemies of peace & progress. May injured recover soon.
— Amit Shah (@AmitShah) April 4, 2021 " class="align-text-top noRightClick twitterSection" data="
">I bow to the sacrifices of our brave security personnel martyred while fighting Maoists in Chhattisgarh. Nation will never forget their valour. My condolences are with their families. We will continue our fight against these enemies of peace & progress. May injured recover soon.
— Amit Shah (@AmitShah) April 4, 2021I bow to the sacrifices of our brave security personnel martyred while fighting Maoists in Chhattisgarh. Nation will never forget their valour. My condolences are with their families. We will continue our fight against these enemies of peace & progress. May injured recover soon.
— Amit Shah (@AmitShah) April 4, 2021
ಛತ್ತೀಸ್‌ಗಢದ ಸುಕ್ಮಾ-ಬಿಜಾಪುರ್ ಪ್ರದೇಶದಲ್ಲಿ ನಿನ್ನೆಯಿಂದ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. 31 ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಇವರಲ್ಲಿ 16 ಮಂದಿ ಸಿಆರ್‌ಪಿಎಫ್ ಯೋಧರಾಗಿದ್ದಾರೆ. 9 ಮಂದಿ ನಕ್ಸಲರನ್ನು ಸದೆಬಡಿಯಲಾಗಿದೆ.
ಹೆಚ್ಚಿನ ಓದಿಗೆ: ಛತ್ತೀಸ್‌ಗಡದಲ್ಲಿ ನಕ್ಸಲರ ಅಟ್ಟಹಾಸ: ಗುಂಡಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮ
ಮಾವೋವಾದಿಗಳ ವಿರುದ್ಧ ಹೋರಾಡುವಾಗ ಹುತಾತ್ಮರಾದ ನಮ್ಮ ಕೆಚ್ಚೆದೆಯ ಭದ್ರತಾ ಸಿಬ್ಬಂದಿಯ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ. ರಾಷ್ಟ್ರವು ಅವರ ಶೌರ್ಯವನ್ನು ಎಂದಿಗೂ ಮರೆಯುವುದಿಲ್ಲ. ಅವರ ಕುಟುಂಬಗಳಿಗೆ ನನ್ನ ಸಾಂತ್ವನಗಳು.
ಶಾಂತಿ ಮತ್ತು ಪ್ರಗತಿಯ ವಿರುದ್ಧ ಇರುವ ಈ ಶತ್ರುಗಳ ವಿರುದ್ಧ ನಾವು ನಮ್ಮ ಹೋರಾಟ ಮುಂದುವರಿಸುತ್ತೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಶಾ ಟ್ವೀಟ್ ಮಾಡಿದ್ದಾರೆ.