ಕೋಲ್ಕತಾ (ಪಶ್ಚಿಮ ಬಂಗಾಳ) : ಬಂಗಾಳದಲ್ಲಿ ಪಕ್ಷ ಸಂಘಟನೆಗಾಗಿ ತೆರಳಿರುವ ಗೃಹ ಸಚಿವ ಅಮಿತ್ ಶಾ, ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಮತಾ ಬ್ಯಾನರ್ಜಿ ಆಡಳಿತವು ಮಂಡಿಯೂರಿರುವ ಸದ್ದು ಕೇಳುತ್ತಿದೆ ಎಂದಿದ್ದಾರೆ.
ಕ್ರಾಂತಿಕಾರಿ ಹೋರಾಟಗಾರ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಹೂಮಾಲೆ ಹಾಕಿ ಬಳಿಕ ಮಾತನಾಡಿದ ಅಮಿತ್ ಶಾ, ಕೇಂದ್ರದಿಂದ ಮಂಜೂರಾಗಿರುವ ಹಲವು ಯೋಜನೆಗಳನ್ನು ಬಡವರಿಗೆ ತಲುಪಲು ಬಿಡುತ್ತಿಲ್ಲ ಎಂದು ಆರೋಪಿಸಿದರು. ಕಳೆದ ರಾತ್ರಿಯಿಂದ ಪಶ್ಚಿಮ ಬಂಗಾಳದಲ್ಲಿ ನನಗೆ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿರುವುದು ಕೇಳಿಬರುತ್ತಿದೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಬದಲಾವಣೆ ತರುವ ವಿಶ್ವಾಸ ನಮಗಿದೆ ಎಂದರು. ಮುಂದಿನ ಚುನಾವಣೆಯಲ್ಲಿ ಮೂರನೇ ಎರಡರಷ್ಟು ಬಹುಮತ ಪಡೆದು ಅಧಿಕಾರ ಪಡೆಯಲಿದ್ದೇವೆ ಎಂದಿದ್ದಾರೆ.
ಇಷ್ಟೇ ಅಲ್ಲದೆ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಯ ಕುರಿತು ದೀದಿ ಸರ್ಕಾರದ ವಿರುದ್ಧ ಅಮಿತ್ ಶಾ ಕಿಡಿಕಾರಿದರು.