ETV Bharat / bharat

Sanatana Dharma : ಇಂಡಿಯಾ ಮೈತ್ರಿಕೂಟದಿಂದ ಸನಾತನ ಧರ್ಮಕ್ಕೆ ಅವಮಾನ; ಗೃಹ ಸಚಿವ ಅಮಿತ್​ ಶಾ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ಸನಾತನ ಧರ್ಮದ ಹೇಳಿಕೆ ವಿವಾದ ಸೃಷ್ಟಿಸಿದೆ. ಇದರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕಿಡಿಕಾರಿದ್ದಾರೆ. ವೋಟಿಗಾಗಿ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಇಂಡಿಯಾ ಮೈತ್ರಿಕೂಟವನ್ನು ಟೀಕಿಸಿದ್ದಾರೆ.

ಗೃಹ ಸಚಿವ ಅಮಿತ್​ ಶಾ
ಗೃಹ ಸಚಿವ ಅಮಿತ್​ ಶಾ
author img

By ETV Bharat Karnataka Team

Published : Sep 3, 2023, 4:14 PM IST

ಜೈಪುರ (ರಾಜಸ್ಥಾನ): ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್​ 'ಸನಾತನ ಧರ್ಮ ಸೊಳ್ಳೆ, ಡೆಂಗ್ಯೂ, ಪ್ಲೂ, ಮಲೇರಿಯಾ ಇದ್ದ ಹಾಗೆ' ಎಂದು ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಬಿಜೆಪಿಗೆ ಪ್ರಬಲ ಟೀಕಾಸ್ತ್ರ ನೀಡಿದಂತಾಗಿದ್ದು, ಇಂಡಿಯಾ ಮೈತ್ರಿಕೂಟ ಸನಾತನ ಧರ್ಮದ ವಿರುದ್ಧವಾಗಿದೆ. ಕಾಂಗ್ರೆಸ್​ ಸೇರಿದಂತೆ ಅದರ ಮಿತ್ರ ಪಕ್ಷಗಳು ಹಿಂದು ಧರ್ಮವನ್ನು ಪದೆ ಪದೇ ಅವಮಾನಿಸುತ್ತಿವೆ ಎಂದು ಕಿಡಿಕಾರಿದೆ.

ಚುನಾವಣಾ ರಾಜ್ಯವಾದ ರಾಜಸ್ಥಾನದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು, ವಿಪಕ್ಷಗಳ ಮೈತ್ರಿಕೂಟ ಸನಾತನ ಧರ್ಮವನ್ನು ಅವಮಾನಿಸುತ್ತಿದೆ. ಕೇವಲ ವೋಟಿಗಾಗಿ ಪವಿತ್ರ ಧರ್ಮವನ್ನೇ ಕೊನೆಗಾಣಿಸುವ ಮಾತನ್ನಾಡುತ್ತಿದೆ ಎಂದು ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​, ಸಂಸದ ರಾಹುಲ್​ ಗಾಂಧಿ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದ್ದಾರೆ.

ವೋಟಿಗಾಗಿ ಸನಾತನಕ್ಕೆ ಅವಮಾನ: ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿರುವ 'ಪರಿವರ್ತನ್ ಸಂಕಲ್ಪ ಯಾತ್ರೆ'ಯಲ್ಲಿ ತಮಿಳುನಾಡು ಸಚಿವ ಉದಯ್​ನಿಧಿ ಸ್ಟಾಲಿನ್​ ಹೇಳಿಕೆಯನ್ನು ಖಂಡಿಸಿದ ಶಾ, ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮವನ್ನು ಅವಮಾನಿಸುತ್ತಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನಾಯಕರು ಕೇವಲ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸನಾತನ ಧರ್ಮವನ್ನು ಕೊನೆಗಾಣಿಸುವುದಾಗಿ ಹೇಳುತ್ತಿದ್ದಾರೆ. ಅವರು ನಮ್ಮ 'ಸನಾತನ'ವನ್ನು ಅವಮಾನಿಸುತ್ತಿರುವುದು ಇದೇ ಮೊದಲಲ್ಲ ಎಂದು ಟೀಕಿಸಿದರು.

ಧರ್ಮದ ಆಧಾರದ ಮೇಲೆ ರಾಜಕಾರಣ ನಡೆಸುವ ಕಾಂಗ್ರೆಸ್​, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ಬಜೆಟ್‌ನಲ್ಲಿ ಮೊದಲ ಆದ್ಯತೆ ಅಲ್ಪಸಂಖ್ಯಾತರಿಗೆ ಎಂದು ಹೇಳಿದ್ದರು. ಆದರೆ, ಬಿಜೆಪಿ ಹಾಗಲ್ಲ. ಬಡವರು, ಬುಡಕಟ್ಟು ಸಮುದಾಯ, ದಲಿತರು ಮತ್ತು ಹಿಂದುಳಿದವರಿಗೆ ಮೊದಲ ಆದ್ಯತೆ ನೀಡುತ್ತದೆ ಎಂದು ಹೇಳಿದರು.

ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿರುವ ಉದಯನಿಧಿ ಸ್ಟಾಲಿನ್, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಯ ಪುತ್ರ ಸೇರಿದಂತೆ ಡಿಎಂಕೆ ನಾಯಕರು ಸನಾತನ ಧರ್ಮವನ್ನು ದೇಶದಿಂದಲೇ ತೊಲಗಿಸಬೇಕು ಎಂದು ಹೇಳುತ್ತಿದ್ದಾರೆ. ಮತಕ್ಕಾಗಿ ಧರ್ಮವನ್ನು ಹೀಯಾಳಿಸುತ್ತಿದ್ದಾರೆ ಎಂದು ಶಾ ಟೀಕಿಸಿದರು.

ರಾಹುಲ್​ ಹೇಳಿಕೆಗೆ ಟೀಕೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹಿಂದೂ ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ ಜೊತೆ ಹೋಲಿಸಿದ್ದರು. ಲಷ್ಕರ್ ಎ ತೊಯ್ಬಾಗಿಂತ ಹಿಂದೂ ಸಂಘಟನೆಗಳು ಅಪಾಯಕಾರಿ ಎಂದಿದ್ದರು. ಪ್ರಧಾನಿ ಮೋದಿ ಅವರು ಮತ್ತೆ ಪ್ರಧಾನಿಯಾದರೆ, ಸನಾತನ ಧರ್ಮ ದೇಶದಲ್ಲಿ ಆಡಳಿತ ನಡೆಸುತ್ತದೆ ಎಂದು ಹೇಳುತ್ತಿದ್ದಾರೆ. ಇದೆಲ್ಲವೂ ಸನಾತನ ವಿರೋಧಿ ಹೇಳಿಕೆಗಳು ಎಂದು ಅಮಿತ್​ ಶಾ ದೂರಿದರು.

ಇದನ್ನೂ ಓದಿ: One nation one election: 'ಒಂದು ರಾಷ್ಟ್ರ ಒಂದು ಚುನಾವಣೆ' ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ; ರಾಹುಲ್​ ಗಾಂಧಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.