ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಶೇಷ ಕೋರ್ಟ್ನಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಫೆ. 22ರೊಳಗೆ ಖುದ್ದಾಗಿ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪರ ವಕೀಲ ಸಂಜಯ್ ಬಸು ಮಾನನಷ್ಟ ಮೊಕದ್ದಮೆ ಹೂಡಿರುವ ಕಾರಣ ಇದೀಗ ಸಮನ್ಸ್ ಜಾರಿಗೊಳಿಸಲಾಗಿದೆ. ಬಿಧಾನ್ ನಗರದಲ್ಲಿರುವ ವಿಶೇಷ ನ್ಯಾಯಾಲಯದಿಂದ ಇದೀಗ ಸಮನ್ಸ್ ಜಾರಿಯಾಗಿದ್ದು, ಭಾರತೀಯ ದಂಡ ಸಹಿತೆ ಸೆಕ್ಷನ್ 500ರ ಅಡಿ ಅವರ ಮೇಲೆ ಮಾನಹಾನಿ ಪ್ರಕರಣ ದಾಖಲಾಗಿದೆ.
ಓದಿ: ರಾಜಕೀಯ ಬಿಕ್ಕಟ್ಟು, ಚುನಾವಣೆ ಕಾವು; ಫೆ. 25ಕ್ಕೆ ಪುದುಚೇರಿಗೆ ನಮೋ!
2018ರ ಆಗಸ್ಟ್ 11ರಂದು ಪಶ್ಚಿಮ ಬಂಗಾಳದಲ್ಲಿ ರೋಡ್ ಶೋ ನಡೆಸಿದ್ದ ಅಮಿತ್ ಶಾ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ್ದರು. ಇದೇ ವಿಚಾರವಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ಕೂಡ ನಡೆಯಲಿದ್ದು, ಬಿಜೆಪಿ-ತೃಣಮೂಲ ಕಾಂಗ್ರೆಸ್ ನಡುವಿನ ಮುಸುಕಿನ ಗುದ್ದಾಟ ಜೋರಾಗಿದೆ.