ETV Bharat / bharat

ಮುಂಗಾರು ಮುನ್ನೆಚ್ಚರಿಕೆ ಕ್ರಮ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ - ಮುಂಗಾರು ಮಳೆ ವಿಷಯವಾಗಿ ಅಮಿತ್ ಶಾ ಸಭೆ

ಸಭೆಯಲ್ಲಿ ಗೃಹ ಸಚಿವರು ದೊಡ್ಡ ಅಣೆಕಟ್ಟುಗಳ ಹೂಳು ತೆಗೆಯುವ ಕಾರ್ಯದ ಯೋಜನೆ ರೂಪಿಸಲು ಜಲಶಕ್ತಿ ಸಚಿವಾಲಯಕ್ಕೆ ಸಲಹೆ ನೀಡುವ ನಿರೀಕ್ಷೆಯಿದೆ.

Amit Shah to review flood control preparedness for monsoon
ಮುಂಗಾರು ಮಳೆ ವಿಷಯವಾಗಿ ಅಮಿತ್ ಶಾ ಸಭೆ
author img

By

Published : Jun 2, 2022, 3:17 PM IST

ನವದೆಹಲಿ: ದೇಶದಲ್ಲಿ ಮುಂಗಾರು ಮುನ್ನೆಚ್ಚರಿಕೆ ಕ್ರಮಗಳ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಕೇರಳದಲ್ಲಿ ಮೂರು ದಿನಗಳ ಮುಂಚಿತವಾಗಿ ಮುಂಗಾರು ಆರಂಭವಾದ ಹಿನ್ನೆಲೆಯಲ್ಲಿ ಅಮಿತ್​ ಶಾ ಈ ಸಭೆ ಕರೆದಿದ್ದಾರೆ.

ಮುಂಗಾರು ಮಳೆಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಎದುರಿಸುವ ಸಿದ್ಧತೆಗಳನ್ನು ಪರಿಶೀಲಿಸುವ ಕುರಿತು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಪ್ರವಾಹ ಮತ್ತು ಡ್ಯಾಂಗಳಲ್ಲಿ ನೀರಿನ ಮಟ್ಟದ ಮೇಲೆ ನಿಗಾ ವಹಿಸಲು ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯ ಬಲಪಡಿಸುವ ವಿಷಯದ ಬಗ್ಗೆ ಚರ್ಚಿಸಲಿದ್ದಾರೆ.

ಈ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಗಜೇಂದ್ರ ಶೇಖಾವತ್, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಹಾಗೂ ಭಾರತೀಯ ಹವಾಮಾನ ಇಲಾಖೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಜಲ ಆಯೋಗದ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಗೃಹ ಸಚಿವರು ದೊಡ್ಡ ಅಣೆಕಟ್ಟುಗಳ ಹೂಳು ತೆಗೆಯುವ ಕಾರ್ಯದ ಯೋಜನೆ ರೂಪಿಸಲು ಜಲಶಕ್ತಿ ಸಚಿವಾಲಯಕ್ಕೆ ಸಲಹೆ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಮದುವೆಗೆಂದು ದೋಣಿಯಲ್ಲಿ ತೆರಳುತ್ತಿದ್ದ ಮೂವರು ಸಹೋದರರು ನೀರು ಪಾಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.