ಮುಂಬೈ: ಅಮರಾವತಿ ಸಂಸದೆ ನವನೀತ್ ರಾಣಾ ಅವರು ಇಂದು ಬೈಕುಲ್ಲಾ ಜೈಲಿನಿಂದ ಬಿಡುಗಡೆಯಾದ ನಂತರ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಅವರನ್ನು ಭೇಟಿ ಮಾಡಲು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಪ್ರಕರಣದಲ್ಲಿ ದಂಪತಿ ಬಂಧನಕ್ಕೆ ಒಳಗಾಗಿದ್ದರು. ಇಂದು ನವನೀತ್ ರಾಣಾಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು, ಮುಂಬೈ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ನವನೀತ್ ರಾಣಾಗೆ ಮುಂಬೈನ ವಿಶೇಷ ನ್ಯಾಯಾಲಯ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪತ್ನಿಯೊಂದಿಗೆ ಬಂಧನಕ್ಕೊಳಗಾಗಿರುವ ಪತಿ ರವಿ ರಾಣಾ ಅವರು ನೆರೆಯ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದು, ಇನ್ನೂ ಬಿಡುಗಡೆಯಾಗಿಲ್ಲ.
ಇದನ್ನೂ ಓದಿ: ಕಲಬುರಗಿಯಲ್ಲಿ ಅತ್ತೆ-ಮಾವನ ಮನೆ ಕಬ್ಜಾ.. ಡಿಸಿ ಕಚೇರಿ ಬಳಿ ರಂಪಾಟ ಮಾಡಿದ ಮಹಿಳೆ ಬಂಧನ