ಅಮೃತಸರ (ಪಂಜಾಬ್): ಜನಸಾಮಾನ್ಯರನ್ನು ವಂಚಿಸುತ್ತಿದ್ದ ನಕಲಿ ನ್ಯಾಯಾಧೀಶನನ್ನು ಪಂಜಾಬ್ನ ಅಮೃತಸರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಿಸು ಧೀರ್ ಎಂದು ಗುರುತಿಸಲಾಗಿದೆ.
ಆರೋಪಿ ತಾನು ನ್ಯಾಯಾಧೀಶನೆಂದು ಹೇಳಿ ಜನರಿಗೆ ವಂಚಿಸುತ್ತಿದ್ದ. ಅಲ್ಲದೇ ತನ್ನ ಖಾಸಗಿ ವಾಹನಕ್ಕೆ ಧ್ವಜ ಮತ್ತು ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ಎಂಬ ನಾಮಫಲಕವನ್ನೂ ಅಳವಡಿಸಿದ್ದನು. ಈ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ಆರೋಪಿಯ ಮನೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಶೈಕ್ಷಣಿಕ ದಾಖಲಾತಿಗಳನ್ನು ನೀಡುವಂತೆ ಕೇಳಿದಾಗ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕನಿಗೆ ಜಾಮೀನು ನಿರಾಕರಣೆ