ETV Bharat / bharat

ಅರುಣಾಚಲ ಪ್ರದೇಶದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ: ಆತಂಕದಲ್ಲಿ ಜನತೆ - ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್‌

ಇಂದು ಬೆಳಗ್ಗೆ ಅರುಣಾಚಲ ಪ್ರದೇಶದ ಪಶ್ಚಿಮ ಸಿಯಾಂಗ್‌ನಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.7 ಮತ್ತು 3.5 ತೀವ್ರತೆ ದಾಖಲಾಗಿದೆ ಎಂದು ಎನ್‌ಸಿಎಸ್ ತಿಳಿಸಿದೆ.

ಭೂಕಂಪನ
earthquake
author img

By

Published : Nov 10, 2022, 12:29 PM IST

ಇಟಾನಗರ(ಅರುಣಾಚಲ ಪ್ರದೇಶ): ಇಲ್ಲಿನ ಪಶ್ಚಿಮ ಸಿಯಾಂಗ್‌ನಲ್ಲಿ ಇಂದು ಬೆಳಗ್ಗೆ 10.31ರ ಸುಮಾರಿಗೆ ಭೂಕಂಪನ ಉಂಟಾಗಿದ್ದು, ರಿಕ್ಟರ್​ ಮಾಪಕದಲ್ಲಿ 5.7 ರಷ್ಟು ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್​ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದೆ.

10 ಕಿ.ಮೀ ಆಳದಲ್ಲಿ ಭೂಕಂಪನ ಆಳದ ಕೇಂದ್ರವನ್ನು ಗುರುತಿಸಲಾಗಿದೆ. ಸುಮಾರು 94.42 ಕಿ.ಮೀ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರದ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: ಸರಣಿ ಭೂಕಂಪನಕ್ಕೆ ನಡುಗಿದ ನೇಪಾಳ: ಕನಿಷ್ಠ 6 ಸಾವು, ಉತ್ತರ ಭಾರತದ ಹಲವೆಡೆ ಕಂಪನ

ಅಷ್ಟೇ ಅಲ್ಲದೇ, ಇದೇ ಪ್ರದೇಶದಲ್ಲಿ ಬೆಳಗ್ಗೆ 10:59 ರ ಸುಮಾರಿಗೆ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವವಾಗಿದ್ದು, 3.5 ತೀವ್ರತೆ ದಾಖಲಾಗಿದೆ. ಭೂಮಿ ಕಂಪಿಸಿರುವುದರಿಂದ ಬೆಚ್ಚಿಬಿದ್ದ ಜನತೆ ಮನೆಯಿಂದ ಹೊರಗೆ ಓಡಿ ಬಂದಿದ್ದು, ಯಾವುದೇ ಸಾವು, ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.