ಇಟಾನಗರ: ನಸುಕಿನಲ್ಲಿ ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್‌ನಲ್ಲಿ ಭೂಕಂಪನ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಅರುಣಾಚಲ ಪ್ರದೇಶದ ಪಶ್ಚಿಮ ಕಾಮೆಂಗ್‌ನಲ್ಲಿ ನಸುಕಿನ 4:09ಕ್ಕೆ ವರದಿಯಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇದುವರೆಗೂ ಯಾವುದೇ ಹಾನಿಯ ವರದಿಯಾಗಿಲ್ಲ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.