ನರ್ನಾಲ್ (ಹರಿಯಾಣ): ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವು ತಿಂಗಳುಗಳಿಂದ ಬಿಡಾಡಿ ದನಗಳಿಂದ ಜನರ ಜೀವಕ್ಕೆ ಅಪಾಯ ಎದುರಾಗಿದೆ. ಇಲ್ಲಿನ ಮನೆಯ ಹೊರಗೆ ನಿಂತಿದ್ದ ವೃದ್ಧೆಯೊಬ್ಬಳ ಮೇಲೆ ದಾಳಿ ಮಾಡಿದ ಗೂಳಿಯೊಂದು ಕೊಂಬುಗಳಿಂದ ಎತ್ತಿ ಬಿಸಾಡಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ.
ಕೊಂಬುಗಳಿಂದ ಎತ್ತಿರುವುದರಿಂದ ಮಹಿಳೆಯ ಹೊಟ್ಟೆಗೆ ಗಂಭೀರವಾದ ಗಾಯವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಬಿಡಾಡಿ ದನಗಳ ಹಾವಳಿ ತಡೆಗೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.