ವಿಜಯವಾಡ (ಆಂಧ್ರಪ್ರದೇಶ): ಬಂಡಲ್‌ಗಟ್ಟಲೆ ವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಳ್ಳಲು ಆಂಧ್ರಪ್ರದೇಶ ಪೊಲೀಸರು ಯಶಸ್ವಿಯಾಗಿದ್ದು, ಇವುಗಳ ಒಟ್ಟು ಮೌಲ್ಯ ಬರೋಬ್ಬರಿ 3.5 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ.
ಹರಿಯಾಣದಿಂದ ಈ ಸಿಗರೇಟ್‌ಗಳನ್ನು ಅಕ್ರಮವಾಗಿ ತರಿಸಿಕೊಳ್ಳಲಾಗಿತ್ತು ಎಂದು ತಿಳಿದು ಬಂದಿದ್ದು, ಆಂಧ್ರಪ್ರದೇಶದ ವಿವಿಧ ಸ್ಥಳಗಳಿಗೆ ಸಾಗಣೆ ಮಾಡಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ಈಗಾಗಲೇ ಓರ್ವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.
ಶುಕ್ರವಾರ ರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ವಶಕ್ಕೆ ಪಡೆದುಕೊಂಡಿದ್ದು, ಇದರ ಹಿಂದೆ ದೊಡ್ಡ ಮಟ್ಟದ ಜಾಲ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ವಿದೇಶಿ ನಿರ್ಮಿತ ಸಿಗರೇಟ್ಗಳು 2017ರ ತಂಬಾಕು ಉತ್ಪನ್ನಗಳ ತಿದ್ದುಪಡಿ ಕಾಯ್ದೆ ಪ್ರಕಾರ ಭಾರತದಲ್ಲಿ ನಿಷೇಧಿಸಲಾಗಿದ್ದು, ಇದರ ಮಧ್ಯೆ ಕೂಡ ಅಕ್ರಮವಾಗಿ ಇಷ್ಟೊಂದು ಮೌಲ್ಯದ ಸಿಗರೇಟ್ ಭಾರತಕ್ಕೆ ರಫ್ತಾಗಿರುವುದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.