ETV Bharat / bharat

ಆಂಧ್ರ ರೈಲು ಅಪಘಾತ : ಸಾವಿನ ಸಂಖ್ಯೆ 14ಕ್ಕೆ ಏರಿಕೆ..ಸಿಎಂ ಜಗನ್​ ಜೊತೆ ಮಾತುಕತೆ ನಡೆಸಿದ ರೈಲ್ವೆ ಸಚಿವ

ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕಂಟಕಪಲ್ಲಿಯಲ್ಲಿ ನಡೆದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ ಆಗಿದೆ. ಇನ್ನು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

andhra-train-accident-railways-minister-speaks-with-cm-jagan-reddy-updates-him-of-situation
ಆಂಧ್ರ ರೈಲು ಅಪಘಾತ : ಸಾವಿನ ಸಂಖ್ಯೆ 9ಕ್ಕೆ ಏರಿಕೆ..ಸಿಎಂ ಜಗನ್​ ಜೊತೆ ಮಾತುಕತೆ ನಡೆಸಿದ ರೈಲ್ವೇ ಸಚಿವ
author img

By ETV Bharat Karnataka Team

Published : Oct 30, 2023, 7:05 AM IST

Updated : Oct 30, 2023, 7:36 AM IST

ಅಮರಾವತಿ (ಆಂಧ್ರಪ್ರದೇಶ) : ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕಂಟಕಪಲ್ಲಿ ಎಂಬಲ್ಲಿ ಭಾನುವಾರ ಸಂಜೆ ನಡೆದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ ಆಗಿದೆ. ಅಪಘಾತದಲ್ಲಿ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಇಬ್ಬರು ಲೋಕೋ ಪೈಲೆಟ್​ಗಳು ಸಾವನ್ನಪ್ಪಿದ್ದಾರೆ. ರೈಲು ಅಪಘಾತದ ಸಂಬಂಧ 12 ರೈಲುಗಳ ಸಂಚಾರ ರದ್ದಾಗಿದ್ದು, ಕೆಲವು ರೈಲುಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ರೈಲು ಅಪಘಾತ ಸಂಬಂಧ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಅವರು ಆಂಧ್ರ ಸಿಎಂ ವೈಎಸ್​​ ಜಗನ್ ಮೋಹನ್​ ರೆಡ್ಡಿ ಜೊತೆ ಮಾತುಕತೆ ನಡೆಸಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ. ಸರ್ಕಾರದ ವತಿಯಿಂದ ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಹಾಗೂ ಗಂಭೀರ ಗಾಯಗೊಂಡವರ ಕುಟುಂಬಸ್ಥರಿಗೆ 2 ಲಕ್ಷ ರೂ ಪರಿಹಾರ ನೀಡಲಾಗುತ್ತದೆ. ಜೊತೆಗೆ ಬೇರೆ ರಾಜ್ಯದ ಮೃತ ಪ್ರಯಾಣಿಕರಿಗೆ 2 ಲಕ್ಷ ರೂ ಪರಿಹಾರ ಹಾಗೂ ಗಂಭೀರ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದೆ.

  • #WATCH | Andhra Pradesh train accident: "As per the data, 9 casualties are there. As per official information, 29 people have been injured...," says Biswajit Sahu, CPRO, East Coast Railway. pic.twitter.com/REsLjnVQdn

    — ANI (@ANI) October 29, 2023 " class="align-text-top noRightClick twitterSection" data=" ">

ವಿಜಯನಗರ ಜಿಲ್ಲೆಯ ಕಂಟಕಪಲ್ಲಿಯಲ್ಲಿ ನಡೆದ ರೈಲು ಅಪಘಾತ ಸಂಬಂಧ ಆಂಧ್ರ ಸಿಎಂ ಜಗನ್​ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮತ್ತು ಪರಿಹಾರ ಒದಗಿಸುವ ಕಾರ್ಯ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದೆ. ಜೊತೆಗೆ ರೈಲು ಅಪಘಾತ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಸುತ್ತಮುತ್ತಲಿನ ಜಿಲ್ಲೆಗಳಾದ ವಿಶಾಖಪಟ್ಟಣಂ, ಅನಕಪಲ್ಲಿ ಸೇರಿದಂತೆ ಹಲವು ಜಿಲ್ಲೆಗಳಿಂದ ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ. ಜೊತೆಗೆ ಘಟನೆ ಸಂಬಂಧ ಇಂಚಿಂಚೂ ಮಾಹಿತಿಯನ್ನು ಸಿಎಂ ಅವರಿಗೆ ನೀಡಲಾಗುತ್ತಿದೆ ಎಂದು ಕಚೇರಿ ತಿಳಿಸಿದೆ.

ಘಟನೆಯಲ್ಲಿ ಇದುವರೆಗೆ 40 ಮಂದಿ ಗಾಯಗೊಂಡಿದ್ದಾರೆ. 32 ಮಂದಿಯನ್ನು ವಿಜಯನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತರ ಮೂವರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಎಲ್ಲಾ ಗಾಯಾಳುಗಳು ಆಂಧ್ರಪ್ರದೇಶದವರು ಎಂದು ತಿಳಿಸಿದೆ.

  • #WATCH | Andhra Pradesh train accident: Rescue operations continue in Vizianagaram district.

    "As per the data, 9 casualties are there and 29 people have been injured...," says Biswajit Sahu, CPRO, East Coast Railway. pic.twitter.com/N3adqmASxx

ಭಾನುವಾರ ಸಂಜೆ ವಿಜಯನಗರ ಜಿಲ್ಲೆಯ ಕಂಟಕಪಲ್ಲಿ ಎಂಬಲ್ಲಿ ಎರಡು ಪ್ಯಾಸೆಂಜರ್​ ರೈಲುಗಳ ನಡುವೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಮೂರು ಬೋಗಿಗಳು ಹಳಿ ತಪ್ಪಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಪೂರ್ವ ಕರಾವಳಿ ರೈಲ್ವೆಯ ಸಿಪಿಆರ್​ಒ ಬಿಸ್ವಜಿತ್ ಸಾಹು, ಇಲ್ಲಿನ ನಡೆ ರೈಲು ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 29ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಕ್ರಾಸಿಂಗ್​ ವೇಳೆ ಎರಡು ಪ್ಯಾಸೆಂಜರ್​ ರೈಲುಗಳ ಮಧ್ಯೆ ಡಿಕ್ಕಿ.. 6 ಜನರು ಸಾವು, 40 ಕ್ಕೂ ಅಧಿಕ ಮಂದಿಗೆ ಗಾಯ

Last Updated : Oct 30, 2023, 7:36 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.