ಅಲಿರಾಜಪುರ (ಮಧ್ಯಪ್ರದೇಶ): ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಇದರಿಂದ ರೊಚ್ಚಿಗೆದ್ದು ಸ್ಥಳೀಯರು ಚಾಲಕನನ್ನು ಅದೇ ವಾಹನದಲ್ಲಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಛೋಟಿಪೋಲ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಪಿಕಪ್ ವಾಹನವು ಡಿಕ್ಕಿ ಹೊಡೆದು 5 ವರ್ಷದ ಕಂಜಿ ಎಂಬ ಬಾಲಕಿ ಮೃತಪಟ್ಟಿದ್ದಳು. ಈ ಘಟನೆಯಿಂದ ಸ್ಥಳದಲ್ಲಿದ್ದ ಗ್ರಾಮಸ್ಥರು ಚಾಲಕನಿಗೆ ಥಳಿಸಿ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಚಾಲಕ ತೀವ್ರವಾಗಿ ಸುಟ್ಟು ಹೋಗಿದ್ದು, ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಆದರೆ, ಮಾರ್ಗ ಮಧ್ಯದಲ್ಲೇ ಚಾಲಕಕೊನೆಯುಸಿರೆಳೆದಿದ್ದಾನೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಬಾಗಲಕೋಟೆ: ಸಾರ್ವಜನಿಕವಾಗಿ ವಕೀಲೆ ಮೇಲೆ ಹಲ್ಲೆ