ಮುಂಬೈ(ಮಹಾರಾಷ್ಟ್ರ): 100 ಕೋಟಿ ರೂಪಾಯಿ ಭ್ರಷ್ಟಾಚಾರ ಹಗರಣದಲ್ಲಿ ಬಂಧಿತರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ವರ್ಷದಿಂದ ಜೈಲು ಶಿಕ್ಷೆಗೆ ಒಳಗಾಗಿದ್ದ ಎನ್‌ಸಿಪಿ ನಾಯಕನಿಗೆ ರಿಲೀಫ್ ಸಿಕ್ಕಿದೆ.
ಅಕ್ರಮ ಹಣ ವರ್ಗಾವಣೆ, 100 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣ ಪ್ರಕರಣ ದಾಖಲಿಸಿಕೊಂಡ ಇಡಿ ಅನಿಲ್ ದೇಶ್ಮುಖ್ ಅವರನ್ನು ಬಂಧಿಸಿತ್ತು. ಬಳಿಕ ಸಿಬಿಐನಿಂದಲೂ ತನಿಖೆಗೆ ಒಳಗಾಗಿ ಜೈಲು ಪಾಲಾಗಿದ್ದರು. ಜಾಮೀನು ಕೋರಿ ಮಾಜಿ ಗೃಹ ಸಚಿವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಕಳೆದ ವಾರ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಂಬಿರ್ ಸಿಂಗ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಪತ್ರ ಬರೆದು ಅನಿಲ್ ದೇಶಮುಖ್ ವಿರುದ್ಧ 100 ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದ ಗಂಭೀರ ಆರೋಪ ಮಾಡಿದ್ದರು.
ಆರೋಪದಲ್ಲಿ ಭಾಗಿಯಾದ ಎಪಿಐ ಆಗಿದ್ದ ಸಚಿನ್ ವಾಜೆ ಅವರನ್ನು ಪ್ರಮುಖ ಆರೋಪಿಯಾಗಿ ಬಂಧಿಸಲಾಗಿತ್ತು. ಅಲ್ಲದೇ, ದೇಶಮುಖ್ ಅವರ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂಧೆ ಅವರನ್ನು ಕೂಡ ಬಂಧಿಸಲಾಗಿದೆ.
ಓದಿ: ಬಿಜೆಪಿಯಲ್ಲಿ ಯಾರೇ ಸಿಎಂ ಆದ್ರೂ ಅವರು ಜನರಿಗಾಗಿ ಕೆಲಸ ಮಾಡುತ್ತಾರೆ: ಸಿಎಂ ಖಟ್ಟರ್