ETV Bharat / bharat

ರೈತರಿಗಾಗಿ ತಮ್ಮ'ಕೊನೆಯ ಪ್ರತಿಭಟನೆ' ನಡೆಸುವುದಾಗಿ ಅಣ್ಣಾ ಹಜಾರೆ ಎಚ್ಚರಿಕೆ - ಉಪವಾಸ ಸತ್ಯಾಗ್ರಹ ಎಚ್ಚರಿಕೆ ನೀಡಿದ ಅಣ್ಣಾ ಹಜಾರೆ

2021ರ ಜನವರಿ ಅಂತ್ಯದ ವೇಳೆಗೆ ಕೇಂದ್ರ ಸರ್ಕಾರವು ರೈತರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅವರ ಬೇಡಿಕೆಗಳನ್ನು ಈಡೇರಿಸದಿದ್ದರೆ ರೈತರಿಗಾಗಿ ತಮ್ಮ "ಕೊನೆಯ ಪ್ರತಿಭಟನೆ" ಪ್ರಾರಂಭಿಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಎಚ್ಚರಿಕೆ ನೀಡಿದ್ದಾರೆ.

Anna Hazare
ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ
author img

By

Published : Dec 28, 2020, 2:58 PM IST

Updated : Dec 28, 2020, 4:27 PM IST

ಪುಣೆ: ಮುಂದಿನ ವರ್ಷ ಜನವರಿ ಅಂತ್ಯದ ವೇಳೆಗೆ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಇಟ್ಟಿರುವ ಬೇಡಿಕೆಯನ್ನು ಕೇಂದ್ರ ಸರ್ಕಾರವು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಎಚ್ಚರಿಕೆ ನೀಡಿದ್ದು, ಇದು ತಮ್ಮ "ಕೊನೆಯ ಪ್ರತಿಭಟನೆ" ಎಂದಿದ್ದಾರೆ.

ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ತಮ್ಮ ರಾಲೆಗಾಂವ್ ಸಿದ್ಧಿ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಬೆಳೆಗಾರರಿಗಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಏನೂ ಕ್ರಮ ತೆಗೆದುಕೊಂಡಿಲ್ಲ.

"ಸರ್ಕಾರವು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಇದರಿಂದಾಗಿ ನನಗೆ ಸರ್ಕಾರದ ಮೇಲೆ ಯಾವುದೇ ನಂಬಿಕೆ ಉಳಿದಿಲ್ಲ. ನೋಡೋಣ, ನನ್ನ ಬೇಡಿಕೆಗಳ ಮೇಲೆ ಕೇಂದ್ರವು ಯಾವ ಕ್ರಮ ತೆಗೆದುಕೊಳ್ಳುತ್ತದೆ. ಅವರು ಒಂದು ತಿಂಗಳ ಸಮಯ ಕೋರಿದ್ದಾರೆ. ಹಾಗಾಗಿ ನಾನು ನೀಡಿದ್ದೇನೆ. ಜನವರಿ ಅಂತ್ಯದವರೆಗೆ ಅವರ ಸಮಯ. ನನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾನು ಉಪವಾಸ ಸತ್ಯಗ್ರಹವನ್ನು ಆರಂಭಿಸುತ್ತೇನೆ. ಇದು ನನ್ನ ಕೊನೆಯ ಪ್ರತಿಭಟನೆಯಾಗಿದೆ" ಎಂದು ಹೇಳಿದ್ದಾರೆ.

ಎಂ.ಎಸ್.ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದು ಮತ್ತು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗಕ್ಕೆ (ಸಿಎಸಿಪಿ) ಸ್ವಾಯತ್ತತೆ ನೀಡುವುದು ಸೇರಿದಂತೆ ಮತ್ತಿತರೆ ಬೇಡಿಕೆಗಳನ್ನು ಸ್ವೀಕರಿಸದಿದ್ದರೆ. ಹಜಾರೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಉಪವಾಸ ಸತ್ಯಾಗ್ರಹದ ಬಗ್ಗೆ ಎಚ್ಚರಿಕೆ ನೀಡಿದರು.

ಬಿಜೆಪಿಯ ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರದ ವಿಧಾನಸಭೆ ಮಾಜಿ ಸ್ಪೀಕರ್ ಹರಿಭೌ ಬಾಗಡೆ ಇತ್ತೀಚೆಗೆ ಹಜಾರೆ ಅವರನ್ನು ಭೇಟಿ ಮಾಡಿ ಕೇಂದ್ರ ಪರಿಚಯಿಸಿರುವ ಮೂರು ಕೃಷಿ ಕಾನೂನುಗಳ ಬಗ್ಗೆ ವಿವರಿಸಿದರು.

ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಕರೆದ ಭಾರತ್ ಬಂದ್‌ಗೆ ಬೆಂಬಲವಾಗಿ ಹಜಾರೆ ಡಿಸೆಂಬರ್ 8ರಂದು ಉಪವಾಸ ಆಚರಿಸಿದರು.

ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳನ್ನು ಕೃಷಿ ಕ್ಷೇತ್ರದ ಪ್ರಮುಖ ಸುಧಾರಣೆಗಳೆಂದು ಸರ್ಕಾರ ತಿಳಿಸಿದ್ದು, ಮಧ್ಯವರ್ತಿಗಳನ್ನು ತೆಗೆದುಹಾಕುತ್ತದೆ ಮತ್ತು ರೈತರಿಗೆ ದೇಶದಲ್ಲಿ ಎಲ್ಲಿಯಾದರೂ ಮಾರಾಟ ಮಾಡಲು ಅವಕಾಶ ನೀಡುತ್ತದೆ.

Last Updated : Dec 28, 2020, 4:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.