ಅಹ್ಮದ್‌ನಗರ: ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿದಂತೆ ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ವಿಫಲವಾದರೆ ಈ ತಿಂಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮಾಧ್ಯಮ ಹೇಳಿಕೆಯನ್ನು ಈ ಸಂಬಂಧ ಬಿಡುಗಡೆ ಮಾಡಿರುವ ಹಜಾರೆ, ಕಳೆದ ಮೂರು ವರ್ಷಗಳಿಂದ ಸರ್ಕಾರ ಅವರನ್ನು ಕಡೆಗಣಿಸುತ್ತಿದೆ ಎಂದು ಹೇಳಿದ್ದಾರೆ. ಈ ಹಿಂದೆ ಡಿಸೆಂಬರ್‌ನಲ್ಲಿ ಹಜಾರೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಪತ್ರ ಬರೆದಿದ್ದು, ಅವರ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವ ಎಚ್ಚರಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ವಿಧಾನಸಭಾ ಸ್ಪೀಕರ್ ಹರಿಭೌ ಬಾಗಡೆ, ಸಂಸದ ಭಗವತ್ ಕರದ್ ಮತ್ತು ಮಾಜಿ ಸಚಿವ ಗಿರೀಶ್ ಮಹಾಜನ್ ಅವರು ಇತ್ತೀಚೆಗೆ ಹಜಾರೆ ಅವರನ್ನು ಭೇಟಿ ಮಾಡಿ ಕೇಂದ್ರವು ಜಾರಿ ತಂದಿರುವ ಮೂರು ಕೃಷಿ ಕಾನೂನುಗಳ ವಿವರಗಳನ್ನು ನೀಡಿದ್ದರು.
ಕೇಂದ್ರದ ನೂತನ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.